ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಅಗಿರುವ ಬಿಜೆಪಿಯ ಕೆ ಆರ್ ಪುರ ಶಾಸಕ ಬೈರತಿ ಬಸವರಾಜ ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ವಶಕ್ಕೆ ನೀಡಿ ಬೆಂಗಳೂರು ನ್ಯಾಯಾಲಯ ಆದೇಶಿಸಿದೆ.
ಶಾಸಕರನ್ನು ರವಿವಾರ ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಯಿತು. ಇದಕ್ಕೂ ಮೊದಲು ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಹೃದಯ ಸಂಬಂಧಿ ಅಸ್ವಸ್ಥತೆ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲು ಬೌರಿಂಗ್ ಆಸ್ಪತ್ರೆ ವೈದ್ಯರು ಸೂಚಿಸಿದ್ದರು. ವೈದ್ಯಕೀಯ ವರದಿ ಪರಿಶೀಲಿಸಿದ ನ್ಯಾಯಾಧೀಶರು, ಆರೋಗ್ಯ ಸ್ಥಿತಿ ಸಹಜವಾಗಿದೆ ಎಂದು ಗಮನಿಸಿ ಸಿಐಡಿ ವಶಕ್ಕೆ ನೀಡುವಂತೆ ಆದೇಶಿಸಿದ್ದಾರೆ.
ಫೆ.15ರಿಂದ ಫೆ.21ರವರೆಗೆ ಏಳು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಸಿಐಡಿ ಪರ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಅಶೋಕ್ ನಾಯ್ಕ್ ಹಾಗೂ ತನಿಖಾಧಿಕಾರಿ ಡಿವೈಎಸ್ಪಿ ಗೌತಮ್ ನ್ಯಾಯಾಲಯಕ್ಕೆ ವೈದ್ಯಕೀ ವರದಿ ಸಲ್ಲಿಸಿದರು.
ಜಮೀನು ವಿವಾದ ಸಂಬಂಧ ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈ 15ರಂದು ರೌಡಿಶೀಟರ್ ಬಿಕ್ಲು ಶಿವ ಕೊಲೆ ನಡೆದಿತ್ತು. ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಬೈರತಿ ಬಸವರಾಜ ಅವರು ಐದನೇ ಆರೋಪಿಯಾಗಿದ್ದಾರೆ. ಮೊದಲಿಗೆ ಎಫ್‌ಐಆರ್ ರದ್ದು ಕೋರಿ ಬೈರತಿ ಬಸವರಾಜ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ತನಿಖಾಧಿಕಾರಿಗಳು ಬೈರತಿ ಬಸವರಾಜ ಅವರನ್ನು ಬಂಧಿಸಬಾರದು. ಬಸವರಾಜು ತನಿಖೆಗೆ ಸಹಕರಿಸಬೇಕು ಎಂದು ಆರಂಭದಲ್ಲಿ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಬಸವರಾಜು ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು.

ನಂತರ 2025ರ ಆಗಸ್ಟ್ 12ರಂದು ಸಿಐಡಿ ಪೊಲೀಸರು ಪ್ರಕರಣದಲ್ಲಿ ಕೋಕಾ ಕಾಯಿದೆ ಹೇರಿದ್ದರು. ಇದರ ರದ್ದತಿಗೆ ಮತ್ತು ನಿರೀಕ್ಷಣಾ ಜಾಮೀನು ಕೋರಿ ಬಸವರಾಜ ಅವರು ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಕೋಕಾ ಅನ್ವಯಿಸಿದ್ದ ಸಿಐಡಿ ಪೊಲೀಸರ ಕ್ರಮ ರದ್ದುಪಡಿಸಿದ್ದ ಹೈಕೋರ್ಟ್, ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಅದಕ್ಕಾಗಿ ವಿಚಾರಣಾಧೀನ ನ್ಯಾಯಾಲಯದ ಮೊರೆ ಹೋಗುವಂತೆ ಡಿಸೆಂಬರ್ 19ರಂದು ಸೂಚಿಸಿತ್ತು.
ಮರುದಿನವೇ ನಿರೀಕ್ಷಣಾ ಜಾಮೀನು ಕೋರಿ ಬಸವರಾಜು ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ನಿರೀಕ್ಷಣಾ ಜಾಮೀನಿಗಾಗಿ 2025ರ ಡಿಸೆಂಬರ್ 24ರಂದು ಬಸವರಾಜ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. 2025ರ ಡಿಸೆಂಬರ್ 26ರಂದು ನ್ಯಾಯಮೂರ್ತಿ ಜಿ ಬಸವರಾಜ ಅವರ ರಜಾಕಾಲೀನ ಏಕ ಸದಸ್ಯ ಪೀಠವು ಬೈರತಿ ಬಸವರಾಜ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ನಂತರ ಹೈಕೋರ್ಟ್ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು.