ಚೈತ್ರಾ ಟಿಕೆಟ್‌ ಹಗರಣ: ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 800 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿಗಳು

ಸಿಸಿಬಿಯು 68 ಸಾಕ್ಷ್ಯಗಳನ್ನ ಕಲೆ ಹಾಕಿದೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿದೆ. ಡಿಜಿಟಲ್‌ ಸಾಕ್ಷ್ಯ ಮತ್ತು ಬ್ಯಾಂಕ್‌ ಸ್ಟೇಟ್‌ಮೆಂಟ್‌ಗಳನ್ನೂ ಆರೋಪಪಟ್ಟಿಯ ಜೊತೆ ಸಲ್ಲಿಸಲಾಗಿದೆ ಎನ್ನಲಾಗಿದೆ.
Chaitra Kundapur, Halashri Swamiji
Chaitra Kundapur, Halashri Swamiji

ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ ಚೈತ್ರಾ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಕೇಂದ್ರೀಯ ಅಪರಾಧ ದಳ (ಸಿಸಿಬಿ) 800 ಪುಟಗಳ ಆರೋಪ ಪಟ್ಟಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಬುಧವಾರ ಸಲ್ಲಿಸಿದೆ.

ಬೆಂಗಳೂರಿನ 3ನೇ ಮೂರನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ತನಿಖಾಧಿಕಾರಿಯು ಬುಧವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

Also Read
ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳ ನ್ಯಾಯಾಂಗ ಬಂಧನ ಅಕ್ಟೋಬರ್‌ 6ರವರೆಗೆ ವಿಸ್ತರಣೆ

ಸಿಸಿಬಿಯು 68 ಸಾಕ್ಷ್ಯಗಳನ್ನ ಕಲೆ ಹಾಕಿದೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿದೆ. ಡಿಜಿಟಲ್‌ ಸಾಕ್ಷ್ಯ ಮತ್ತು ಬ್ಯಾಂಕ್‌ ಸ್ಟೇಟ್‌ಮೆಂಟ್‌ಗಳನ್ನೂ ಆರೋಪಪಟ್ಟಿಯ ಜೊತೆ ಸಲ್ಲಿಸಲಾಗಿದೆ ಎನ್ನಲಾಗಿದೆ.

ಆರೋಪಿಗಳಾದ ಚೈತ್ರಾ, ಅಭಿನವ ಹಾಲಶ್ರೀ ಹಾಗೂ ಇತರರ ವಿರುದ್ಧ ಬೆಂಗಳೂರಿನ ಬಂಡೇಪಾಳ್ಯ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 170, 406, 419, 420, 506 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿದೆ.

Related Stories

No stories found.
Kannada Bar & Bench
kannada.barandbench.com