![ರೈತರು, ಹೋರಾಟಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್: ತ್ವರಿತ ಕ್ರಮಕ್ಕೆ ಬಾಂಬೆ ಹೈಕೋರ್ಟ್ ನಿರ್ದೇಶನ [ಚುಟುಕು]](https://gumlet.assettype.com/barandbench-kannada%2F2022-05%2F0e438f3d-1e12-4523-86c4-f33a9a6501fe%2Fbd95db71-dc7b-4342-9006-6dae1a836398.png?auto=format%2Ccompress&fit=max)
ಚಳವಳಿಗಳ ವೇಳೆ ರೈತರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಹೂಡಲಾದ ಕ್ರಿಮಿನಲ್ ಮೊಕದ್ದಮೆ ಹಿಂಪಡೆಯುವ ತನ್ನ ನೀತಿ ಅನುಷ್ಠಾನಕ್ಕೆ ತರಲು ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ ಇತ್ತೀಚೆಗೆ ನಿರ್ದೇಶನ ನೀಡಿದೆ.
ಮೊಕದ್ದಮೆ ವಾಪಸ್ ಪಡೆಯುವ ಅರ್ಜಿಗಳನ್ನು ಪರಿಗಣಿಸಬೇಕಾದ ನ್ಯಾಯಾಲಯಗಳು ಅಂತಹ ಪ್ರಕರಣಗಳಿಗೆ ಆದ್ಯತೆ ನೀಡಿ ಅರ್ಜಿ ಸಲ್ಲಿಸಿದ ದಿನದಿಂದ ಎರಡು ವಾರಗಳ ಒಳಗೆ ವಿಲೇವಾರಿ ಮಾಡುವಂತೆ ಸೂಚಿಸಿದೆ. ಸರ್ಕಾರವು ತನ್ನ ನೀತಿಯನ್ನು ಜಾರಿಗೊಳಿಸುವ ಸಲುವಾಗಿ ಸಮಿತಿಯೊಂದನ್ನು ನೇಮಿಸಿದೆ. ಸಮಿತಿಯು 314 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಮೂರ್ತಿಗಳಾದ ಆರ್ ಡಿ ಧನುಕಾ ಮತ್ತು ಎಸ್ ಜಿ ಮೆಹರೆ ಅವರಿದ್ದ ಪೀಠಕ್ಕೆ ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.