[ಚುಟುಕು] ಹೊಸ ಗುತ್ತಿಗೆ ಕಾರ್ಮಿಕರ ನೇಮಕ ಮಾಡಿಕೊಳ್ಳದಂತೆ ಸ್ಪೈಸ್‌ಜೆಟ್‌ಗೆ ಬಾಂಬೆ ಹೈಕೋರ್ಟ್‌ ನಿರ್ದೇಶನ

Spice Jet

Spice Jet

ಗುತ್ತಿಗೆ ನೌಕರರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೈಸ್‌ ಜೆಟ್‌ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಹಾಗೂ ಕೈಗಾರಿಕಾ ನ್ಯಾಯಮಂಡಳಿಯ ಆದೇಶದ ವಿರುದ್ಧ ಅದು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿರುವ ಫೆ. 8ರವರೆಗೆ ಹೊಸ ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳಬಾರದು ಎಂದು ಬಾಂಬೆ ಹೈಕೋರ್ಟ್‌ ಕಳೆದ ವಾರ ಮಧ್ಯಂತರ ಆದೇಶ ನೀಡಿದೆ. 463 ಗುತ್ತಿಗೆ ನೌಕರರ ಸೇವೆಯನ್ನು ಮುಂದುವರಿಸುವಂತೆ ವಿಮಾನಯಾನ ಕಂಪನಿಗೆ ಸೂಚಿಸಿರುವ ಕೈಗಾರಿಕಾ ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿ ಸ್ಪೈಸ್‌ಜೆಟ್ ಸಲ್ಲಿಸಿದ ಮನವಿಯ ಮೇರೆಗೆ ಈ ನಿರ್ದೇಶನಗಳು ಬಂದಿವೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com