ಕಾಶ್ಮೀರ ಫೈಲ್ಸ್ ಚಿತ್ರದ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಬಾಂಬೆ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಎಂ ಎಸ್ ಕಾರ್ಣಿಕ್ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಮುಸ್ಲಿಮರು ಕಾಶ್ಮೀರ ಪಂಡಿತರನ್ನು ಕೊಲ್ಲುವಂತೆ ಚಿತ್ರಿಸಿರುವುದು ಏಕಪಕ್ಷೀಯವಾಗಿದ್ದು ದೇಶಾದ್ಯಂತ ಹಿಂಸಾಚಾರ ಸಂಭವಿಸಬಹುದು ಎಂದು ಅರ್ಜಿದಾರರಾದ ಉತ್ತರ ಪ್ರದೇಶ ನಿವಾಸಿ ಇಂತೆಜಾರ್ ಹುಸೇನ್ ಸಯ್ಯದ್ ಆತಂಕ ವ್ಯಕ್ತಪಡಿಸಿದ್ದಾರೆ. ಚಿತ್ರ ಮಾರ್ಚ್ 11ರಂದು, ಶುಕ್ರವಾರ ಬಿಡುಗಡೆಯಾಗಲಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.