
Bombay High Court
ವಿಚಾರಣೆಯಲ್ಲಿ 23 ವರ್ಷಗಳಷ್ಟು ವಿಳಂಬವಾಗಿರುವ ಹಿನ್ನೆಲೆಯಲ್ಲಿ ಕಂಪೆನಿಯೊಂದು ತನಿಖೆಯ ಸಮಯದಲ್ಲಿ ಕಡ್ಡಾಯವಾಗಿ ಠೇವಣಿ ಇರಿಸಿದ್ದ ₹ 2 ಕೋಟಿ ಮೊತ್ತವನ್ನು ಹಿಂದಿರುಗಿಸುವಂತೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿದೆ. ಸುಶಿಟೆಕ್ಸ್ ಎಕ್ಸ್‌ಪೋರ್ಟ್ಸ್ (ಇಂಡಿಯಾ) ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಎಂ ಎಸ್ ಕಾರ್ಣಿಕ್ ಅವರಿದ್ದ ಪೀಠ ಕಾನೂನು ಉಲ್ಲಂಘಿಸಿರುವುದಕ್ಕೆ ಅಧಿಕಾರಿಗಳು ವಿಚಾರಣೆ ಆರಂಭಿಸಿರುವುದು ಸೂಕ್ತವೇ ಆದರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಅದನ್ನು ಮುಕ್ತಾಯಗೊಳಿಸಲು ಅವರಿಗೆ ಅನುಮತಿ ಇಲ್ಲ ಎಂದು ಅಭಿಪ್ರಾಯಪಟ್ಟಿತು.
ಹೆಚ್ಚಿನ ವಿವರಗಳಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.