![ಮಕ್ಕಳ ಹಕ್ಕು ರಕ್ಷಣಾ ಆಯೋಗದ ಹುದ್ದೆ ಖಾಲಿ: ಮಹಾರಾಷ್ಟ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಬಾಂಬೆ ಹೈಕೋರ್ಟ್ [ಚುಟುಕು]](https://gumlet.assettype.com/barandbench-kannada%2F2022-03%2F442557a0-3f2a-47be-9954-27239b91eaf3%2Fbarandbench_2021_09_44e1c25c_20c1_4264_9aa0_a028d663bfb8_WhatsApp_Image_2021_09_08_at_2_22_00_PM.avif?auto=format%2Ccompress&fit=max)
Child witness, Bombay High Court
ಮಹಾರಾಷ್ಟ್ರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಎಸ್‌ಸಿಪಿಸಿಆರ್) ಸದಸ್ಯರನ್ನು ನೇಮಿಸುವ ಸಂಬಂಧ ತೆಗೆದುಕೊಂಡ ಕ್ರಮಗಳ ಬಗ್ಗೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಅಗತ್ಯ ಸಂಖ್ಯೆಯ ಸದಸ್ಯರು ಇಲ್ಲದಿರುವುದರಿಂದ ಆಯೋಗ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮನವಿಯಲ್ಲಿರುವ ಅಂಶವನ್ನು ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಎಂ ಎಸ್ ಕಾರ್ಣಿಕ್ ಅವರಿದ್ದ ಪೀಠಕ್ಕೆ ತಿಳಿಸಲಾಯಿತು. ಇದೇ ವೇಳೆ ಸರ್ಕಾರಿ ವಕೀಲೆ ಜ್ಯೋತಿ ಚವಾಣ್ ಅವರು ಸರ್ಕಾರ ಕೈಗೊಂಡ ಕ್ರಮಗಳ ಕುರಿತ ಅಫಿಡವಿಟ್ಟನ್ನು ದಾಖಲೆಯಲ್ಲಿ ಸಲ್ಲಿಸಲು 2 ವಾರಗಳ ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಅನುಮತಿ ನೀಡಿದ ನ್ಯಾಯಾಲಯ ಮಾರ್ಚ್ 21ಕ್ಕೆ ಪ್ರಕರಣವನ್ನು ಮುಂದೂಡಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.