ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಸರ್ಕಾರದ ಅಧಿಸೂಚನೆ

ಈ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಿದ್ದು ನ್ಯಾಯಾಲಯದ ಒಟ್ಟು ನ್ಯಾಯಮೂರ್ತಿ ಹುದ್ದೆಗಳಲ್ಲಿ ಕೇವಲ ಎರಡು ಮಾತ್ರ ಖಾಲಿ ಉಳಿದಿವೆ.
Justices P Mithal,  Sanjay Karol,  PV Sanjay Kumar, Ahsanuddin Amanullah and Manoj Misra
Justices P Mithal, Sanjay Karol, PV Sanjay Kumar, Ahsanuddin Amanullah and Manoj Misra
Published on

ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಐವರು ನ್ಯಾಯಮೂರ್ತಿಗಳ ವಿವರ ಹೀಗಿದೆ.

Also Read
ಕನ್ನಡಿಗರಾದ ನ್ಯಾ. ಅರವಿಂದ್ ಕುಮಾರ್ ಸೇರಿ ಇಬ್ಬರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂ ಶಿಫಾರಸು

- ನ್ಯಾ. ಮಿತ್ತಲ್‌ (ರಾಜಸ್ಥಾನ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ)

- ನ್ಯಾ. ಸಂಜಯ್ ಕರೋಲ್ (ಪಾಟ್ನಾ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ)

- ನ್ಯಾ. ಪಿ ವಿ ಸಂಜಯ್ ಕುಮಾರ್ (ಮಣಿಪುರ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ)

- ನ್ಯಾ. ಅಹ್ಸಾನುದ್ದೀನ್ ಅಮಾನುಲ್ಲಾ (ಪಾಟ್ನಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ)

- ನ್ಯಾ. ಮನೋಜ್ ಮಿಶ್ರಾ (ಅಲಾಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ)

ಈ ಐವರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪದೋನ್ನತಿ  ನೀಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಡಿಸೆಂಬರ್ 13ರಂದು ಶಿಫಾರಸು ಮಾಡಿತ್ತು. ಈ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಿದ್ದು ನ್ಯಾಯಾಲಯದ ಒಟ್ಟು ನ್ಯಾಯಮೂರ್ತಿ ಹುದ್ದೆಗಳಲ್ಲಿ ಕೇವಲ ಎರಡು ಮಾತ್ರ ಖಾಲಿ ಉಳಿದಿವೆ.

ನೇಮಕ ವಿಳಂಬ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಮೂರ್ತಿಗಳ ಹುದ್ದೆಗೆ ಇವರ ಹೆಸರನ್ನು 2022ರ ಡಿಸೆಂಬರ್‌ನಲ್ಲಿ ಶಿಫಾರಸು ಮಾಡಲಾಗಿತ್ತು.

Kannada Bar & Bench
kannada.barandbench.com