ಟೆಲಿಕಾಂ ವಿವಾದಗಳ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿಯ (ಟಿಡಿಎಸ್‌ಎಟಿ) ಅಧ್ಯಕ್ಷ ಹುದ್ದೆಗೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಅವರನ್ನು ನಾಲ್ಕು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ನೇಮಕ ಮಾಡಿದೆ. ನ್ಯಾಯಮೂರ್ತಿ ಪಟೇಲ್ ಅವರ ನೇಮಕಾತಿಯನ್ನು ಪ್ರಧಾನಿ ಅಧ್ಯಕ್ಷತೆಯ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಅನುಮೋದಿಸಿದ್ದು ಶುಕ್ರವಾರ ಈ ಕುರಿತು ಆದೇಶ ಹೊರಡಿಸಲಾಗಿದೆ.
ನ್ಯಾಯಮೂರ್ತಿ ಪಟೇಲ್ ತಿಂಗಳಿಗೆ ₹2.5 ಲಕ್ಷ ವೇತನ ಪಡೆಯಲಿದ್ದಾರೆ. ನ್ಯಾ. ಪಟೇಲ್ ಅವರು ಮಾರ್ಚ್ 12ರಂದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗುತ್ತಿದ್ದಾರೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.