ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಸಂಬಂಧಿಸಿದಂತೆ ಡಿಪೊ ನಿರ್ಮಾಣ ಮತ್ತು ಅಭಿವೃದ್ಧಿಯ ಕುರಿತಾಗಿ ಮಾಂಟೆಕಾರ್ಲೊ ಲಿಮಿಟೆಡ್ ಕಂಪೆನಿಯ ಬಿಡ್ ಪರಿಗಣಿಸುವಂತೆ ರಾಷ್ಟ್ರೀಯ ಅತಿವೇಗದ ರೈಲು ನಿಗಮ ನಿಯಮಿತಕ್ಕೆ (ಎನ್‌ಎಚ್‌ಎಸ್‌ಆರ್‌ಸಿಎಲ್) ನಿರ್ದೇಶಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಬದಿಗೆ ಸರಿಸಿದೆ. ಅತಿವೇಗದ ರೈಲು ಯೋಜನೆಯು ರಾಷ್ಟ್ರೀಯ ಪ್ರಾಮುಖ್ಯತೆ ಹೊಂದಿದೆ ಎಂದು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಎ ಎಸ್ ಬೋಪಣ್ಣ ಅವರಿದ್ದ ವಿಭಾಗೀಯ ಪೀಠ ಹೇಳಿದ್ದು, 2021ರ ಆಗಸ್ಟ್ ತೀರ್ಪನ್ನು ಬದಿಗೆ ಸರಿಸಿದೆ.
ಹೆಚ್ಚಿನ ವಿವರಗಳಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.