
Vishal Sudhikumar Jha, Bulli Bai deals
ಪ್ರತಿಷ್ಠಿತ ಮುಸ್ಲಿಂ ಮಹಿಳೆಯರ ಛಾಯಾಚಿತ್ರಗಳನ್ನು ಅಕ್ರಮವಾಗಿ ಬಳಸಿ ಅವರನ್ನು ಹರಾಜಿಗಿರಿಸಿರುವುದಾಗಿ ಬಿಂಬಿಸಿದ್ದ ವಿವಾದಾತ್ಮಕ ಬುಲ್ಲಿಬಾಯ್ ಅಪ್ಲಿಕೇಷನ್ ನಿರ್ಮಾಣದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಬಂಧಿತನಾಗಿದ್ದ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಝಾಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ.
ಆರೋಪಿಯನ್ನು ಮೊದಲು ಪೊಲೀಸ್ ವಶಕ್ಕೆ ನೀಡಲಾಗಿತ್ತು, ಅನಂತರ ಕೋವಿಡ್ ಸೋಂಕಿಗೆ ಈಡಾದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಆರೋಪಿಗೆ ಜಾಮೀನು ನಿರಾಕರಣೆಯಾದ ಹಿನ್ನೆಲೆಯಲ್ಲಿ ಸೆಷನ್ಸ್ ನ್ಯಾಯಾಲಯವನ್ನು ಆರೋಪಿ ಎಡತಾಕಿದ್ದರು.
ಹೆಚ್ಚಿನ ವಿವರಗಳಿಗೆ 'ಬಾರ್ ಅಂಡ್ ಬೆಂಚ್' ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.