ಶಾಲೆಗಳನ್ನು ಭೌತಿಕವಾಗಿ ತೆರೆಯಲು ಕಲ್ಕತ್ತಾ ಹೈಕೋರ್ಟ್ ನಿರ್ದೇಶನ: ಶುಲ್ಕ ಕಡಿತದ ಆದೇಶವೂ ತೆರವು [ಚುಟುಕು]

Calcutta High Court

Calcutta High Court

Published on

ಕೋವಿಡ್‌ ಮೂರನೇ ಅಲೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಭೌತಿಕವಾಗಿ ಆರಂಭಿಸಲು ಕಲ್ಕತ್ತಾ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಅಂತೆಯೇ ಶಾಲೆ ಮತ್ತಿತರ ಶಿಕ್ಷಣ ಸಂಸ್ಥೆಗಳು ವಿಧಿಸುವ ಶುಲ್ಕದಲ್ಲಿ ಶೇ 20ರಷ್ಟು ರಿಯಾಯಿತಿ ನೀಡಬೇಕು ಎಂಬ ಆದೇಶವನ್ನೂ ನ್ಯಾಯಮೂರ್ತಿಗಳಾದ ಐ ಪಿ ಮುಖರ್ಜಿ ಮತ್ತು ಮೌಶುಮಿ ಭಟ್ಟಾಚಾರ್ಯ ಅವರಿದ್ದ ಪೀಠವು ತೆರವುಗೊಳಿಸಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com