ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನಾರಾಯಣ್ ಅವರಿಗೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಜಾಮೀನು ನೀಡಿದೆ ಎಂದು ವರದಿಯಾಗಿದೆ.
ನರೈನ್ ಅವರ ಮೇಲೆ ಇತರ ಆರೋಪಿಗಳೊಂದಿಗೆ ಸೇರಿ ದೂರುದಾರ ಯುವತಿ ಮೇಲೆ ಎರಡು ಸಂದರ್ಭಗಳಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪವಿದ್ದು, ಈ ಸಂಬಂಧ ತನಿಖೆ ಎದುರಿಸುತ್ತಿದ್ದಾರೆ.
ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಅವರನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಆರಂಭಿಸಿತ್ತು. ಅಕ್ಟೋಬರ್ 1ರಂದು ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಸಣ್ಣ ದಂಡವೊಂದನ್ನು ವಿಧಿಸಿ ವ್ಯಕ್ತಿಯೊಬ್ಬರನ್ನು ಸೇವೆಯಿಂದ ನರೈನ್ ವಜಾಗೊಳಿಸಿದ್ದರು. ಅದೇ ವ್ಯಕ್ತಿಯ ಸೊಸೆ ನೀಡಿದ ದೂರು ಆಧರಿಸಿ ನರೈನ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನರೈನ್ ಪರ ವಕೀಲರು ಕಳೆದ ತಿಂಗಳು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದರು. ಘಟನೆ ನಡೆದಾಗ ಆಪಾದಿತರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರಲಿಲ್ಲ ಬದಲಿಗೆ ದೆಹಲಿಯಲ್ಲಿದ್ದರು. ಆದ್ದರಿಂದ, ದೂರು ಪ್ರಚೋದನೆಯಿಂದ ಕೂಡಿದೆ ಎಂದಿದ್ದರು.
ಕಳೆದ ವರ್ಷ ನವೆಂಬರ್‌ನಲ್ಲಿ ಸರ್ವೋಚ್ಚ ನ್ಯಾಯಾಲಯವು ನರೈನ್ ಅವರಿಗೆ ನಿರೀಕ್ಷಣಾ ಜಾಮೀನು ನೀಡುವ ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು.ಕೇಂದ್ರಾಡಳಿತ ಪ್ರದೇಶ ಮತ್ತು ದೆಹಲಿ ಪೊಲೀಸರ ಜಂಟಿ ತಂಡ ನರೈನ್ ಅವರ ಮನೆ ಮೇಲೆ ದಾಳಿ ನಡೆಸಿದ ನಂತರ ದೆಹಲಿ ಹೈಕೋರ್ಟ್ ನರೈನ್ ಅವರ ಟ್ರಾನ್ಸಿಟ್ ಜಾಮೀನು ಅರ್ಜಿಯನ್ನು ಅಂಗೀಕರಿಸಿತ್ತು.