ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಸಿಬಿಐ

ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಅನುಮತಿ ನೀಡಿದ ಹಿನ್ನೆಲೆಯಲ್ಲಿ, ಕೇಜ್ರಿವಾಲ್ ಅವರನ್ನು ಸಿಬಿಐ ಔಪಚಾರಿಕವಾಗಿ ಬಂಧಿಸಿತು.
ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಸಿಬಿಐ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಅಧಿಕೃತವಾಗಿ ಬಂಧಿಸಿದೆ. 

ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಅನುಮತಿ ನೀಡಿದ ಹಿನ್ನೆಲೆಯಲ್ಲಿ, ಕೇಜ್ರಿವಾಲ್ ಅವರನ್ನು ಸಿಬಿಐ ಔಪಚಾರಿಕವಾಗಿ ಬಂಧಿಸಿತು. 

Also Read
ಜಾರಿ ನಿರ್ದೇಶನಾಲಯದಿಂದ ತುರ್ತು ವಿಚಾರಣೆ ಕೋರಿಕೆ: ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆ ತಡೆಹಿಡಿದ ದೆಹಲಿ ಹೈಕೋರ್ಟ್‌

ಇದೇ ವೇಳೆ, ಕೇಜ್ರಿವಾಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ ಸಲ್ಲಿಸಿದ ಮನವಿ ಮತ್ತು ಜೂನ್ 24 ರಂದು ದೆಹಲಿ ಮುಖ್ಯಮಂತ್ರಿ ಅವರನ್ನು ತಿಹಾರ್‌ ಜೈಲಿನಲ್ಲಿ ತನಿಖೆಗೊಳಪಡಿಸಲು ತಾನು ಸಿಬಿಐಗೆ ನೀಡಿದ ಆದೇಶದ ಪ್ರತಿಗಳನ್ನು ಕೇಜ್ರಿವಾಲ್‌ ಅವರಿಗೆ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ. 

 ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಜುಲೈ 20, 2022 ರಂದು ನೀಡಿದ ದೂರಿನ ಮೇರೆಗೆ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿತ್ತು. 

Also Read
ಇ ಡಿ ಬಂಧನ, ರಿಮ್ಯಾಂಡ್‌ ಆದೇಶ ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿ ಆದೇಶ ಕಾಯ್ದರಿಸಿದ ಸುಪ್ರೀಂ

ಜೂನ್ 25ರಂದು ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಜೈಲಿನಿಂದ ಪಡೆದಿದ್ದ ಸಿಬಿಐ ಇಂದು ವಿಚಾರಣಾ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲು ಅನುಮತಿ ಕೋರಿತು. 

ನ್ಯಾಯಾಲಯಕ್ಕೆ ಸಿಬಿಐ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ಅವರನ್ನು ಪ್ರಶ್ನಿಸಲು ಆದೇಶ ಪಡೆಯುವ ಬಗ್ಗೆ ತನಗೆ ಮಾಹಿತಿ ನೀಡಿಲ್ಲ ಈ ವಿಚಾರ ಮಾಧ್ಯಮಗಳಿಂದ ತಿಳಿದುಬಂದಿದೆ ಎಂದು ಕೇಜ್ರಿವಾಲ್ ಪರ ವಕೀಲ ವಿವೇಕ್ ಜೈನ್ ಆಕ್ಷೇಪಿಸಿದರು. 

"ಸಿಬಿಐ ಕ್ರಮ ಕಳವಳಕಾರಿಯಾಗಿದ್ದು ಈ ಕುರಿತ ದಾಖಲೆಗಳನ್ನು ಅಧ್ಯಯನ ಮಾಡಲು ನ್ಯಾಯಾಲಯ ಅವಕಾಶ ಮಾಡಿಕೊಡಬೇಕು ವಿಚಾರಣೆಯನ್ನು ನಾಳೆಗೆ ಮುಂದೂಡಿ" ಎಂದು ಕೇಜ್ರಿವಾಲ್ ಪರ ಹಾಜರಾದ ಮತ್ತೊಬ್ಬ ಹಿರಿಯ ವಕೀಲ ವಿಕ್ರಮ್ ಚೌಧರಿ ಹೇಳಿದರು. 

Also Read
ಕೇಜ್ರಿವಾಲ್‌ ಮನವಿಗೆ ಇ ಡಿ ಆಕ್ಷೇಪ: ಅವರೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ, ನಿಮ್ಮ ಕಸ್ಟಡಿಯಲ್ಲಿ ಅಲ್ಲ ಎಂದ ನ್ಯಾಯಾಲಯ

ಆದರೆ, ತನಿಖೆ ನಡೆಸುವುದು ತನ್ನ ಪರಮಾಧಿಕಾರವಾಗಿದ್ದು ಆರೋಪಿಗಳಿಗೆ ಮಾಹಿತಿ ನೀಡಬೇಕೆಂಬ ಕಾನೂನು ಇಲ್ಲ ಎಂದು ಸಿಬಿಐ ಸಮರ್ಥಿಸಿಕೊಂಡಿತು. 

ಸಿಬಿಐ ಪರ ವಕೀಲರು ಬಂಧನ ಕುರಿತಂತೆ ತಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು. ನಂತರ ಕೇಜ್ರಿವಾಲ್‌ ಪರ ವಕೀಲರ ವಾದ ಆಲಿಸುವುದಾಗಿ ಸ್ಪಷ್ಟಪಡಿಸಿದ ನ್ಯಾಯಾಲಯ ದಾಖಲೆಗಳನ್ನು ಒದಗಿಸುವುದರ ಜೊತೆಗೆ ಆದೇಶ ನೀಡುವುದಾಗಿ ನುಡಿಯಿತು.

Kannada Bar & Bench
kannada.barandbench.com