ಡಿ ಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್‌ ಪಡೆದ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ ಕೆ ಶಿವಕುಮಾರ್‌ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ & ಉಮೇಶ್‌ ಎಂ. ಅಡಿಗ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು.
ಡಿ ಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್‌ ಪಡೆದ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಫೆಬ್ರವರಿ 29ಕ್ಕೆ ಮುಂದೂಡಿದೆ.

ಡಿ ಕೆ ಶಿವಕುಮಾರ್‌ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು.

Also Read
ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್‌: ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಿದ ಹೈಕೋರ್ಟ್‌

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ಮಧ್ಯೆ, ಲೋಕಾಯುಕ್ತ ಎಡಿಜಿಟಿ ಮಧ್ಯಪ್ರವೇಶಿಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್‌ ಅರಬಟ್ಟಿ ಅವರಿಗೆ ನೋಟಿಸ್‌ ಪಡೆಯಲು ಸೂಚಿಸಲಾಗಿದೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ ಅವರಿಗೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಲು ನ್ಯಾಯಾಲಯ ಸೂಚಿಸಿತು. ಆಕ್ಷೇಪಣೆ, ಪ್ರತ್ಯುತ್ತರ ಸಲ್ಲಿಸಲು ಕಾಲಾವಕಾಶ ನೀಡಿ, ಅಂತಿಮವಾಗಿ ವಿಚಾರಣೆಯನ್ನು ಫೆಬ್ರವರಿ 29ಕ್ಕೆ ಮುಂದೂಡಿತು.

Related Stories

No stories found.
Kannada Bar & Bench
kannada.barandbench.com