ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಹುದ್ದಾರ್‌, ನಾಯಕ್‌ ಅವರನ್ನು ನೇಮಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ

ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿ ಹುದ್ದೆಗಳಿದ್ದು, ಈ ನೇಮಕಾತಿಯೊಂದಿಗೆ 49 ಹುದ್ದೆ ಭರ್ತಿಯಾಗಿದ್ದು, 13 ಹುದ್ದೆಗಳು ಖಾಲಿ ಉಳಿದಿವೆ.
Justices Ramachandra Huddar, Venkatesh Naik
Justices Ramachandra Huddar, Venkatesh Naik

ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ರಾಮಚಂದ್ರ ಡಿ. ಹುದ್ದಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ ವೆಂಕಟೇಶ ನಾಯಕ್‌ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಶನಿವಾರ ಅಧಿಸೂಚನೆ ಹೊರಡಿಸಿದೆ.

Also Read
ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ರಾಮಚಂದ್ರ ಹುದ್ದಾರ, ವೆಂಕಟೇಶ ನಾಯಕ್‌ ಹೆಸರು ಶಿಫಾರಸ್ಸು ಮಾಡಿದ ಕೊಲಿಜಿಯಂ

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಜನವರಿ 10ರಂದು ಉಭಯ ನ್ಯಾಯಾಧೀಶರ ಹೆಸರುಗಳನ್ನು ಶಿಫಾರಸ್ಸು ಮಾಡಿತ್ತು. ಭಾರತ ಸರ್ಕಾರದ ದತ್ತಾಂಶದ ಪ್ರಕಾರ ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿ ಹುದ್ದೆಗಳಿದ್ದು, ಈ ನೇಮಕಾತಿಯೊಂದಿಗೆ 49 ಹುದ್ದೆ ಭರ್ತಿಯಾಗಿದ್ದು, 13 ಹುದ್ದೆಗಳು ಖಾಲಿ ಉಳಿದಿವೆ.

Related Stories

No stories found.
Kannada Bar & Bench
kannada.barandbench.com