ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಅವರಿಗೆ ಪದೋನ್ನತಿ: ಕೇಂದ್ರ ಸರ್ಕಾರದ ಅಧಿಸೂಚನೆ

ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ದತ್ತಾ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸು ಮಾಡಿತ್ತು.
Chief Justice Dipankar Datta, Bombay High Court
Chief Justice Dipankar Datta, Bombay High Court

ಬಾಂಬೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

Also Read
ಸುಪ್ರೀಂ ನ್ಯಾಯಮೂರ್ತಿಯಾಗಿ ನ್ಯಾ. ದೀಪಂಕರ್ ದತ್ತಾ ಪದೋನ್ನತಿಗೆ ಎಸ್‌ಸಿಬಿಎ ಅಧ್ಯಕ್ಷ ವಿಕಾಸ್‌ ಸಿಂಗ್ ಆಗ್ರಹ

ಬಾಂಬೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿರುವ ದತ್ತಾ ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸು ಮಾಡಿತ್ತು. ಅವರನ್ನು ಏಪ್ರಿಲ್ 2020 ರಲ್ಲಿ ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು.

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಲೀಲ್ ಕುಮಾರ್ ದತ್ತಾ ಅವರ ಪುತ್ರ ನ್ಯಾ. ದೀಪಂಕರ್‌ ದತ್ತಾ. ಫೆಬ್ರವರಿ 1965 ರಲ್ಲಿ ಜನನ. 1989ರಲ್ಲಿ ಕಲ್ಕತ್ತಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ನ್ಯಾ, ದೀಪಂಕರ್‌ ಅವರು ಅದೇ ವರ್ಷ ವಕೀಲರಾಗಿ ವೃತ್ತಿ ಆರಂಭಿಸಿದರು.

Also Read
ಸಿಜೆಐ ನಡೆಗೆ ಆಕ್ಷೇಪಿಸಿದ್ದು ನ್ಯಾಯಮೂರ್ತಿಗಳಾದ ಚಂದ್ರಚೂಡ್ ಮತ್ತು ನಜೀರ್: ಸುಪ್ರೀಂ ಕೊಲಿಜಿಯಂ

ಕಲ್ಕತ್ತಾ ಹೈಕೋರ್ಟ್‌ನ ಖಾಯಂ ನ್ಯಾಯಮೂರ್ತಿಯಾಗಿ ಜೂನ್ 22, 2006 ರಂದು ಪದೋನ್ನತಿ ಪಡೆಯುವ ಮೊದಲು ಸಾಂವಿಧಾನಿಕ ಮತ್ತು ಸಿವಿಲ್‌ ವಿಷಯಗಳಲ್ಲಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿ ಪ್ರಾಕ್ಟೀಸ್‌ ಮಾಡಿದ್ದರು. ನ್ಯಾ. ದೀಪಂಕರ್‌ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 28 ಕ್ಕೆ ಏರಲಿದೆ. ಸುಪ್ರೀಂ ಕೋರ್ಟ್‌ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 34.

Related Stories

No stories found.
Kannada Bar & Bench
kannada.barandbench.com