ವೈಯಕ್ತಿಕ ದತ್ತಾಂಶ ರಕ್ಷಣಾ ಮಸೂದೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

ಸಂಸತ್ತಿನ ಜಂಟಿ ಸಮಿತಿಯ ಶಿಫಾರಸ್ಸಿನ ಹಿನ್ನೆಲೆಯಲ್ಲಿ 2019ರ ಮಸೂದೆಯನ್ನು ಹಿಂಪಡೆದು ಹೊಸ ಮಸೂದೆ ಮಂಡಿಸಲಾಗುವುದು ಎಂದು ತಿಳಿಸಿರುವ ಸರ್ಕಾರ.
Cyber crime, data security
Cyber crime, data security

ಜಂಟಿ ಸಂಸದೀಯ ಸಮಿತಿಯು (ಜೆಸಿಯು) ನೂತನ ಶಿಫಾರಸ್ಸುಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಮಂಡನೆಗೆ ಬಾಕಿ ಉಳಿದಿದ್ದ ವೈಯಕ್ತಿಕ ದತ್ತಾಂಶ ರಕ್ಷಣಾ ಮಸೂದೆ 2019 (ಪಿಡಿಪಿ ಮಸೂದೆ) ಅನ್ನು ಕೇಂದ್ರ ಸರ್ಕಾರವು ಬುಧವಾರ ಹಿಂಪಡೆದಿದೆ.

ವ್ಯಕ್ತಿಗತವಾಗಿ ವೈಯಕ್ತಿಕ ದತ್ತಾಂಶಕ್ಕೆ ಸಂಬಂಧಿಸಿದ ಡಿಜಿಟಲ್‌ ಖಾಸಗಿತಕ್ಕೆ ರಕ್ಷಣೆ ನೀಡಲು ಮಂಡಿಸಲಾಗಿದ್ದ ಮಸೂದೆಯನ್ನು ಹಿಂಪಡೆಯುವ ಸಂಬಂಧ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನ್‌ ವೈಷ್ಣವ್‌ ಅವರು ಗೊತ್ತುವಳಿ ಮಂಡಿಸಿದರು. ಸಚಿವರ ಗೊತ್ತುವಳಿಯ ಹಿನ್ನೆಲೆಯಲ್ಲಿ ಸದನವು ಧ್ವನಿಮತದ ಮೂಲಕ ಮಸೂದೆ ಹಿಂಪಡೆಯಲು ಒಪ್ಪಿಗೆ ಸೂಚಿಸಿತು.

ಡಿಜಿಟಲ್‌ ವ್ಯವಸ್ಥೆಗೆ ಪೂರಕವಾಗಿ ಸಮಗ್ರ ಕಾನೂನು ಚೌಕಟ್ಟು ರೂಪಿಸಲು ಮಸೂದೆಗೆ 81 ತಿದ್ದುಪಡಿ ಪ್ರಸ್ತಾವ ಸಲ್ಲಿಸಲಾಗಿದ್ದು, 12 ಶಿಫಾರಸ್ಸುಗಳನ್ನು ಮಾಡಲಾಗಿದೆ. ಜೆಸಿಪಿಯ ವರದಿ ಪರಿಗಣಿಸಿ ಮಸೂದೆ ಹಿಂಪಡೆಯಲು ನಿರ್ಧರಿಸಲಾಗಿದ್ದು, ಹೊಸ ಮಸೂದೆಯನ್ನು ಮಂಡಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

2019ರ ಡಿಸೆಂಬರ್‌ 11ರಂದು ಅಂದಿನ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದ ರವಿಶಂಕರ್‌ ಪ್ರಸಾದ್‌ ಅವರು ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದರು. ಈ ಮಸೂದೆಯನ್ನು ಜಂಟಿ ಸದನ ಸಮಿತಿಗೆ ಪರಿಶೀಲನೆಗೆ ನೀಡಲಾಗಿತ್ತು. ಸಮಿತಿಯು 2021ರ ಡಿಸೆಂಬರ್‌ 16ರಂದು ಲೋಕಸಭೆಗೆ ವರದಿ ಸಲ್ಲಿಸಿತ್ತು.

Related Stories

No stories found.
Kannada Bar & Bench
kannada.barandbench.com