

ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರವು ಶನಿವಾರ ಅಧಿಸೂಚನೆ ಪ್ರಕಟಿಸಿದೆ.
ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಉಷಾರಾಣಿ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ ಎಸ್ ಭರತ್ ಕುಮಾರ್ ಮತ್ತು ಕಾನೂನು ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿರುವ ಎನ್ ವಿ ಭವಾನಿ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಸೆಪ್ಟೆಂಬರ್ 10ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.
ಈ ಶಿಫಾರಸ್ಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರವು ಅಧಿಸೂಚನೆ ಪ್ರಕಟಿಸಿದೆ.
ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಯಿದ್ದು, ಹೊಸ ನೇಮಕಾತಿಗಳ ಮೂಲಕ ಒಟ್ಟು 57 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸಲಿದ್ದಾರೆ.