ಕರ್ನಾಟಕ ಹೈಕೋರ್ಟ್‌ಗೆ ಮೂವರು ವಕೀಲರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಅಕ್ಟೋಬರ್‌ 6ರಂದು ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಶಿಫಾರಸ್ಸು ಮಾಡಿತ್ತು.
Karnataka High Court
Karnataka High Court
Published on

ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.

ವಕೀಲರಾದ ಅನಂತ್‌ ರಾಮನಾಥ್‌ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನ್‌ಕುಳೈಲ್ ಶ್ರೀಧರನ್‌ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಅಕ್ಟೋಬರ್‌ 6ರಂದು ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 43 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

Attachment
PDF
Karnataka_High_Court.pdf
Preview
Kannada Bar & Bench
kannada.barandbench.com