V Senthil Balaji
ಸುದ್ದಿಗಳು
ಸಚಿವ ಸೆಂಥಿಲ್ ನ್ಯಾಯಾಂಗ ಬಂಧನ ಅವಧಿ ಜುಲೈ 12 ರವರೆಗೆ ವಿಸ್ತರಿಸಿದ ಚೆನ್ನೈ ನ್ಯಾಯಾಲಯ
ಬೈಪಾಸ್ ಶಸ್ತ್ರಚಿಕಿತ್ಸೆಯ ನಂತರ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಡಿಎಂಕೆ ನಾಯಕ ಸೆಂಥಿಲ್ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನ ಸೆಷನ್ಸ್ ನ್ಯಾಯಾಧೀಶರೆದುರು ಹಾಜರುಪಡಿಸಲಾಯಿತು.
ಸರ್ಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರಿಗೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿಯನ್ನು ಚೆನ್ನೈ ಪ್ರಧಾನ ಸೆಷನ್ಸ್ ನ್ಯಾಯಾಲಯ ಬುಧವಾರ ಎರಡು ವಾರಗಳವರೆಗೆ ವಿಸ್ತರಿಸಿದೆ.
ಬೈಪಾಸ್ ಶಸ್ತ್ರಚಿಕಿತ್ಸೆಯ ನಂತರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಬಾಲಾಜಿ ಜುಲೈ 12ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
ಡಿಎಂಕೆ ನಾಯಕ ಸೆಂಥಿಲ್ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನ ಸೆಷನ್ಸ್ ನ್ಯಾಯಾಧೀಶರೆದುರು ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು ನೀವು ಹೇಗಿದ್ದೀರಿ ಎಂದು ಸಚಿವರನ್ನು ಕೇಳಿದಾಗ, ಅವರು "ನೋವಿದೆ" ಎಂದು ಉತ್ತರಿಸಿದರು.
ಜೂನ್ 14 ರಂದು ಪ್ರಧಾನ ನ್ಯಾಯಾಧೀಶರು ಬಾಲಾಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮರುದಿನ ಸಚಿವರು ಆಸ್ಪತ್ರೆಯಲ್ಲಿರುವಂತೆಯೇ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ (ಇ ಡಿ) ಅನುಮತಿ ನೀಡಿದ್ದರು.


