ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜೀವ್ ಖನ್ನಾ ಅವರ ಹೆಸರನ್ನು ಹಾಲಿ ಸಿಜೆಐ ಡಿ ವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ.
ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಅವರು ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ಖನ್ನಾ ಅವರ ಹೆಸರನ್ನು ಈ ಹುದ್ದೆಗೆ ಸೂಚಿಸಿದ್ದಾರೆ.
ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ನಿವೃತ್ತರಾಗಲಿದ್ದಾರೆ.
ನ್ಯಾ. ಖನ್ನಾ ಅವರು ಮೇ 13, 2025ರಂದು ನಿವೃತ್ತರಾಗಲಿದ್ದು ಆರು ತಿಂಗಳಿಗಿಂತಲೂ ಕಡಿಮೆ ಅವಧಿಗೆ ಸಿಜೆಐ ಹುದ್ದೆ ಅಲಂಕರಿಸಲಿದ್ದಾರೆ.
ವಕೀಲರಾಗಿ 1983ರಲ್ಲಿ ತೊಡಗಿಕೊಂಡ ನ್ಯಾ. ಖನ್ನಾ ಅವರು ತೆರಿಗೆ, ಮಧ್ಯಸ್ಥಿಕೆ, ವಾಣಿಜ್ಯ ಮತ್ತು ಪರಿಸರ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಾಕ್ಟೀಸ್ ಮಾಡಿದ್ದಾರೆ.
ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ 2005ರಲ್ಲಿ ನೇಮಕಗೊಂಡ ಅವರನ್ನು ಒಂದು ವರ್ಷದ ಬಳಿಕ ಖಾಯಂ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು.
ಅವರು ಸುಪ್ರೀಂ ಕೋರ್ಟ್‌ಗೆ ಜನವರಿ 18, 2019ರಂದು ಪದೋನ್ನತಿ ಪಡೆದರು.