ನಕಲಿ ನೋಟು ಚಲಾವಣೆ ಯತ್ನ: ಆರೋಪಿಗೆ ಐದು ವರ್ಷ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್‌

ಒಂದೇ ಸರಣಿ ಸಂಖ್ಯೆಯನ್ನು (2ಬಿಇ901745) ಹೊಂದಿದ್ದ ₹500 ಮುಖಬೆಲೆಯ 30 ನಕಲಿ ನೋಟುಗಳನ್ನು ಟಿ ಎನ್ ಕುಮಾರ ಅವರಿಂದ ಲಕ್ಷ್ಮೀಪುರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದರು.
Currency
Currency
Published on

ಹದಿನಾಲ್ಕು ವರ್ಷಗಳ ಹಿಂದೆ ₹500 ಮುಖಬೆಲೆಯ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷಗಳ ಜೈಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿ ಹಿಡಿದಿದೆ.

ಶಿಕ್ಷೆ ರದ್ದು ಕೋರಿ ಮೈಸೂರಿನ ಟಿ ಎನ್ ಕುಮಾರ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ.

ಅರ್ಜಿದಾರ ಕುಮಾರ್‌ಗೆ ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ 2013ರ ಜನವರಿ 3ರಂದು ಹೊರಡಿಸಿದ್ದ 5 ವರ್ಷಗಳ ಜೈಲು ಶಿಕ್ಷೆ ಆದೇಶವನ್ನು ಎತ್ತಿ ಹಿಡಿದಿದೆ.

ಪ್ರಕರಣದ ಹಿನ್ನೆಲೆ: ಟಿ ಎನ್ ಕುಮಾರ ಅವರನ್ನು ಲಕ್ಷ್ಮೀಪುರ ಠಾಣೆ ಪೊಲೀಸರು ಮೈಸೂರಿನ ಎಂಜಿನಿಯರಿಂಗ್ ಸಂಸ್ಥೆಯ ಬಳಿ 2010ರ ಮಾರ್ಚ್ 3ರಂದು ಬಂಧಿಸಿದ್ದರು. ಒಂದೇ ಸರಣಿ ಸಂಖ್ಯೆಯನ್ನು (2ಬಿಇ901745) ಹೊಂದಿದ್ದ ₹500 ಮುಖಬೆಲೆಯ 30 ನಕಲಿ ನೋಟುಗಳನ್ನು ಅವರಿಂದ ವಶಪಡಿಸಿಕೊಂಡಿದ್ದರು.

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 489 ಸಿ (ಖೋಟಾ ನೋಟುಗಳನ್ನು ಹೊಂದಿದ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು, ವಿಚಾರಣಾ‌ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

Kannada Bar & Bench
kannada.barandbench.com