ಸಿವಿಲ್‌ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಲಿಖಿತ ಪರೀಕ್ಷೆ ಮುಂದೂಡಿಕೆ

Civil Judge Exam
Civil Judge Exam

ಸಿವಿಲ್‌ ನ್ಯಾಯಾಧೀಶರ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 10 ಮತ್ತು 11ರಂದು ನಡೆಯಬೇಕಿದ್ದ ಮುಖ್ಯ ಲಿಖಿತ ಪರೀಕ್ಷೆಯನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುತ್ತಿರುವುದನ್ನು ಗಮನದಲ್ಲಿಟ್ಟು ಮುಂದೂಡಲಾಗಿದೆ.

ಈ ಕುರಿತು ಕರ್ನಾಟಕ ಹೈಕೋರ್ಟ್‌ನ ಪ್ರಭಾರಿ ರಿಜಿಸ್ಟ್ರಾರ್‌ ಜನರಲ್‌ ಹಾಗೂ ಸಿವಿಲ್‌ ನ್ಯಾಯಾಧೀಶರ ನೇಮಕಾತಿ ಸಮಿತಿಯ ಕಾರ್ಯದರ್ಶಿ ಬಿ. ಮುರಳೀಧರ ಪೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಲಿಖಿತ ಪರೀಕ್ಷೆ ನಡೆಸಲಾಗುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಸೆಪ್ಟೆಂಬರ್‌ 8ರಂದು ಹೊರಡಿಸಿರುವ ಸೂಚನೆಯಲ್ಲಿ ತಿಳಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com