CJI DY Chandrachud
ಸುದ್ದಿಗಳು
ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಸುಪ್ರೀಂ ಕೋರ್ಟ್ ನಮನ
ಇದಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಸಿಜೆಐ ನಮನ ಸಲ್ಲಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವಾದ ಬುಧವಾರ ಆ ಇಬ್ಬರು ಮಹಾನ್ ನಾಯಕರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಹಾಗೂ ಉಳಿದ ನ್ಯಾಯಮೂರ್ತಿಗಳು ಗೌರವ ಸಲ್ಲಿಸಿದರು.
ಅವರ ಜನ್ಮದಿನದ ಅಂಗವಾಗಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಿಗೆ ಪ್ರತಿ ವರ್ಷ ಅಕ್ಟೋಬರ್ 2 ರಂದು ರಜೆ ಇರುತ್ತದೆ.
Supreme Court judges pay respects to Lal Bahadur Shastri in Supreme Court Of India
Also Read
ಮಹಾತ್ಮ ಗಾಂಧಿ ಕೊಲೆ ಪ್ರಕರಣ, ಕಚಗುಳಿಯಿಡುವ ಕೋರ್ಟ್ ಹಾಸ್ಯ: ಏನೆಲ್ಲಾ ಇದೆ ದೆಹಲಿ ಹೈಕೋರ್ಟ್ ಜಾಲತಾಣದಲ್ಲಿ!
ಇಂದು ಬೆಳಿಗ್ಗೆ, ಸಿಜೆಐ ಹಾಗೂ ಇತರ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಗಾಂಧೀಜಿಯವರ ಪ್ರತಿಮೆ ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಇದಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಸಿಜೆಐ ನಮನ ಸಲ್ಲಿಸಿದರು.