ಡಿಸೆಂಬರ್‌ 3ಕ್ಕೆ ಸಿಎಲ್‌ಎಟಿ 2024 ಪರೀಕ್ಷೆ

ಪಠ್ಯಕ್ರಮ, ಅರ್ಜಿ, ಕೌನ್ಸೆಲಿಂಗ್‌ ಪ್ರಕ್ರಿಯೆಯ ಕುರಿತು ವಿಸ್ತೃತ ಮಾಹಿತಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
CLAT
CLAT

ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ಸಂಬಂಧಿಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಯನ್ನು (ಸಿಎಲ್‌ಎಟಿ) ಡಿಸೆಂಬರ್‌ 3ಕ್ಕೆ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟ (ಎನ್‌ಎಲ್‌ಯು) ಘೋಷಿಸಿದೆ.

ಪರೀಕ್ಷೆ ದಿನಾಂಕ ನಿರ್ಧರಿಸಲು ಒಕ್ಕೂಟದ ಕಾರ್ಯಕಾರಿ ಮತ್ತು ಆಡಳಿತ ಮಂಡಳಿಯು ಭೋಪಾಲ್‌ನಲ್ಲಿರುವ ರಾಷ್ಟ್ರೀಯ ಕಾನೂನು ಸಂಸ್ಥೆಗಳ ವಿಶ್ವವಿದ್ಯಾಲಯದಲ್ಲಿ ಸಭೆ ನಡೆಸಿತು.

“ಪಠ್ಯಕ್ರಮ, ಅರ್ಜಿ, ಕೌನ್ಸೆಲಿಂಗ್‌ ಪ್ರಕ್ರಿಯೆಯ ಕುರಿತು ವಿಸ್ತೃತ ಮಾಹಿತಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು” ಎಂದು ಒಕ್ಕೂಟವು ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com