CLAT
CLAT

ಡಿಸೆಂಬರ್ 1ಕ್ಕೆ ಸಿಎಲ್ಎಟಿ- 2025 ಪರೀಕ್ಷೆ

ಎಪ್ರಿಲ್ 26ರಂದು ನಡೆದ ಸಭೆಯಲ್ಲಿ ಒಕ್ಕೂಟದ ಕಾರ್ಯಕಾರಿ ಸಮಿತಿ ಮತ್ತು ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ.
Published on

2025ನೇ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ) ಡಿಸೆಂಬರ್ 1, 2024ರಂದು ಮಧ್ಯಾಹ್ನ 2ರಿಂದ 4ಗಂಟೆಯವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟ (ಎನ್‌ಎಲ್‌ಯು) ಪ್ರಕಟಿಸಿದೆ.

ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ (ಎನ್‌ಎಲ್‌ಎಸ್‌ಯುಐ) ಏಪ್ರಿಲ್ 26ರಂದು ನಡೆದ ಸಭೆಯಲ್ಲಿ ಒಕ್ಕೂಟದ ಕಾರ್ಯಕಾರಿ ಸಮಿತಿ ಮತ್ತು ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿವೆ.

ಮೇ 6ರಂದು ಹೊರಡಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ "ಪಠ್ಯಕ್ರಮ, ಅರ್ಜಿ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ" ಎಂದು ತಿಳಿಸಲಾಗಿದೆ.

Kannada Bar & Bench
kannada.barandbench.com