ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

CM Basavaraja Bommai
CM Basavaraja Bommai
Published on

ರಾಜ್ಯದ ವಕೀಲರ ಬಹುಬೇಡಿಕೆಯಾದ ವಕೀಲರ ಮೇಲಿನ ಹಲ್ಲೆಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎನ್ನಲಾದ 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.

ಶುಕ್ರವಾರದ ಸದನದ ಕಾರ್ಯಕಲಾಪದ ಪಟ್ಟಿಯಲ್ಲಿ ಸದರಿ ವಿಧೇಯಕದ ಪರ್ಯಾಲೋಚನೆ ಮತ್ತು ಅಂಗೀಕಾರಕ್ಕೆ ಇಡಲಾಗಿದೆ ಎಂದು ಹೇಳಲಾಗಿದೆ. ಬಜೆಟ್‌ ಅಧಿವೇಶನವು ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ವಿಧೇಯಕವು ಎರಡೂ ಸದನಗಳಲ್ಲಿ ಅಂಗೀಕಾರಗೊಳ್ಳುವುದು ಅನುಮಾನವೆನ್ನಲಾಗಿದೆ.

ವಕೀಲರ ರಕ್ಷಣಾ ಮಸೂದೆ ಜಾರಿಗೊಳಿಸಬೇಕು ಎಂದು ರಾಜ್ಯದಾದ್ಯಂತ ವಕೀಲರ ಸಮುದಾಯ ನಿರಂತರವಾಗಿ ಪ್ರತಿಭಟನೆ, ಧರಣಿ ನಡೆಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Kannada Bar & Bench
kannada.barandbench.com