

ಸುಪ್ರೀಂ ಕೋರ್ಟ್ ಕೊಲಿಜಿಯಂ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿದೆ. ಏಪ್ರಿಲ್ 14ರಂದು ನಡೆದ ಸಭೆಯ ಬಳಿಕ ಈ ಶಿಫಾರಸ್ಸುಗಳನ್ನು ಕೊಲಿಜಿಯಂ ಮಾಡಿದೆ.
ನ್ಯಾಯಾಂಗ ಅಧಿಕಾರಿಗಳಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆ ಗಣೇಶ್ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್ ಅವರ ಪದೋನ್ನತಿಗೆ ಶಿಫಾರಸ್ಸು ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 45 ನ್ಯಾಯಮೂರ್ತಿಗಳ ಹುದ್ದೆಗಳು ಮಾತ್ರ ಭರ್ತಿಯಾಗಿವೆ.