ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸ್ಸು ಮಾಡಿದ ಕೊಲಿಜಿಯಂ

ಕೊಲಿಜಿಯಂ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದರೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಲಿದೆ.
ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸ್ಸು ಮಾಡಿದ ಕೊಲಿಜಿಯಂ
Published on

ವಿವಿಧ ಹೈಕೋರ್ಟ್‌ಗಳ ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ವದ ಕೊಲಿಜಿಯಂ ಮಂಗಳವಾರ ಶಿಫಾರಸ್ಸು ಮಾಡಿದೆ.

  1. ನ್ಯಾ. ಪಂಜಕ್‌ ಮಿತ್ತಲ್‌ (ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ);

  2. ನ್ಯಾ. ಸಂಜಯ್‌ ಕರೋಲ್‌ (ಪಟ್ನಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ);

  3. ನ್ಯಾ. ಪಿ ವಿ ಸಂಜಯ್‌ ಕುಮಾರ್‌ (ಮಣಿಪುರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ);

  4. ನ್ಯಾ. ಅಹ್ಸಾನುದ್ದೀನ್‌ ಅಮಾನುಲ್ಲಾ (ಪಟ್ನಾ ಹೈಕೋರ್ಟ್‌ ನ್ಯಾಯಮೂರ್ತಿ);

  5. ನ್ಯಾ. ಮನೋಜ್‌ ಮಿಶ್ರಾ (ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ).

ಕೊಲಿಜಿಯಂ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರವು ಅನುಮೋದಿಸಿದರೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಲಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ 34 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಹಾಲಿ 28 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

Kannada Bar & Bench
kannada.barandbench.com