ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ದಾಖಲಿಸಿರುವ ದಾವೆಯಲ್ಲಿ ಯಾವ ಅಂಶಗಳಿವೆ?

ಬಾಲಿವುಡ್‌ ನಟಿ ಕಂಗನಾ ರನೌತ್ ಅವರ ವಿರುದ್ಧ ತಮಕೂರಿನ ಜೆಎಂಎಫ್‌ ಸಿ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 21ರಂದು ವಕೀಲ ರಮೇಶ್ ನಾಯ್ಕ್ ಅವರು ದಾವೆ ಹೂಡಿದ್ದಾರೆ. ದಾವೆಯಲ್ಲಿ ಅವರು ಪ್ರಸ್ತಾಪಿಸಿರುವ ಅಂಶಗಳೇನು? ಇಲ್ಲಿದೆ ಮಾಹಿತಿ.
ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ದಾಖಲಿಸಿರುವ ದಾವೆಯಲ್ಲಿ ಯಾವ ಅಂಶಗಳಿವೆ?
Kangana Ranaut

“ಸಾಮಾಜಿಕ ಜಾಲತಾಣದಲ್ಲಿ ಕೀಳು ಅಭಿರುಚಿ ಒಳಗೊಂಡ ಮಾಹಿತಿ ಹಂಚಿಕೊಳ್ಳಲು ಕಾರಣರಾದವರು ಮತ್ತು ಇಂಥ ವಿಚಾರಗಳಿಗೆ ಪ್ರಚಾರ ನೀಡುವ ಮೂಲಕ ದೇಶದ ಬೆನ್ನೆಲುಬಾದ ರೈತ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸುವುದರೊಂದಿಗೆ ಗಲಭೆ ವ್ಯಾಪಿಸಲು ಹಾಗೂ ದೇಶವನ್ನು ಶಿಥಿಲಗೊಳಿಸಲು ಕಾರಣವಾಗುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ವಕೀಲ ರಮೇಶ್ ನಾಯಕ್ ಅವರು ಬಾಲಿವುಡ್‌ನ ವಿವಾದಾತ್ಮಕ ನಟಿ ಕಂಗನಾ ರನೌತ್ ವಿರುದ್ಧ ದಾಖಲಿಸಿರುವ ದಾವೆಯಲ್ಲಿ ವಿವರಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ವಲಯಕ್ಕೆ ಸಂಬಂಧಿಸಿದಂತೆ ತಂದಿರುವ ಕಾನೂನು ತಿದ್ದುಪಡಿಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂಬ ರೀತಿಯಲ್ಲಿ ಬಿಂಬಿಸಿ ಟ್ವೀಟ್ ಮಾಡಿದ್ದ ನಟಿ ಕಂಗನಾ ರನೌತ್ ಅವರ ವಿರುದ್ಧ ತಮಕೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 21ರಂದು ರಮೇಶ್ ಅವರು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Also Read
ಕಂಗನಾ ಬಂಗಲೆ ಧ್ವಂಸ ಪ್ರಕರಣ: ಪಕ್ಷಕಾರರಾಗಿ ಶಿವಸೇನೆ ವಕ್ತಾರ ಸಂಜಯ್ ರಾವತ್ ಸೇರ್ಪಡೆಗೆ ಬಾಂಬೆ ಹೈಕೋರ್ಟ್ ಅನುಮತಿ

“... ಆರೋಪಿಯ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿರುವ ಟ್ವೀಟ್ ನಿಂದಾಗಿ ವಿಭಿನ್ನ ಸೈದ್ಧಾಂತಿಕ ನಿಲುವು ಹೊಂದಿರುವ ಭಿನ್ನ ಗುಂಪುಗಳ ನಡುವೆ ಗಲಭೆ ಸಂಭವಿಸುವ ಸಾಧ್ಯತೆ ಇರುತ್ತದೆ. ಇದರ ಬಗ್ಗೆ ಸರ್ಕಾರಿ ವ್ಯವಸ್ಥೆಯು ಕುರುಡುಗಣ್ಣಾಗಿದೆ. ಇದನ್ನು ನಿಯಂತ್ರಿಸಲು ಯಾವುದೇ ಮಾರ್ಗಸೂಚಿಗಳಿಲ್ಲ. ಇದರಿಂದ ಖಾತರಿಯಾಗುವುದೇನೆಂದರೆ ಸರ್ಕಾರವು ಕ್ರಮಕೈಗೊಳ್ಳುವುದಕ್ಕೂ ಮುನ್ನ ಒಂದಷ್ಟು ಕೆಡುಕಾಗುವುದುನ್ನು ಅದು ಬಯಸುತ್ತಿರುವಂತಿದೆ” ಎಂದು ಅವರು ವಿವರಿಸಿದ್ದಾರೆ.

ಕಂಗನಾ ಅವರ ಅಪರಾಧಗಳ ಬಗ್ಗೆ ಗಂಭೀರವಾದ ನಿಲುವು ತಳೆಯುವ ಮೂಲಕ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೂಕ್ತ ಸೆಕ್ಷನ್ ಗಳ ಅಡಿ ಎಫ್‌ ಐಆರ್ ದಾಖಲಿಸಲು ಸೂಚಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

No stories found.
Kannada Bar & Bench
kannada.barandbench.com