ವೈದ್ಯಕೀಯ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವೆ, ಕರ್ನಾಟಕ ಸ್ಟಾಂಪು ವಿಧೇಯಕಗಳಿಗೆ ಪರಿಷತ್‌ ಅನುಮೋದನೆ

ಎಂಟು ಮಸೂದೆಗಳಿಗೆ ಬುಧವಾರ ವಿಧಾನಸಭೆ ಒಪ್ಪಿಗೆ ನೀಡಿದ್ದು, ಮೂರು ಮಸೂದೆಗಳು ಮಂಡನೆಯಾಗಿವೆ.
ವೈದ್ಯಕೀಯ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವೆ, ಕರ್ನಾಟಕ ಸ್ಟಾಂಪು ವಿಧೇಯಕಗಳಿಗೆ ಪರಿಷತ್‌ ಅನುಮೋದನೆ

ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ವಿಧೇಯಕ ಮತ್ತು ಕರ್ನಾಟಕ ಸ್ಟಾಂಪು ವಿಧೇಯಕ ಮಂಗಳವಾರ ವಿಧಾನ ಪರಿಷತ್‌ನಲ್ಲೂ ಅನುಮೋದನೆಗೊಂಡಿವೆ. ಈ ಎರಡೂ ಮಸೂದೆಗಳಿಗೆ ಸೋಮವಾರ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿತ್ತು.

ಉಳಿದಂತೆ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮ) ವಿಧೇಯಕ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರೆ ಕಾನೂನು ವಿಧೇಯಕ, ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ವಿಧೇಯಕ, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ, ಕರ್ನಾಟಕ ಉಚ್ಚ ನ್ಯಾಯಾಲಯ ವಿಧೇಯಕ ಮತ್ತು ಕರ್ನಾಟಕ ಸಿವಿಲ್‌ ನ್ಯಾಯಾಲಯಗಳ ವಿಧೇಯಕಗಳಿಗೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

Also Read
ವಿಧಾನಸಭೆಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ, ಸಿವಿಲ್‌ ನ್ಯಾಯಾಲಯಗಳ ತಿದ್ದುಪಡಿ ವಿಧೇಯಕ ಮಂಡನೆ

ಅಲ್ಲದೇ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಧನವಿನಿಯೋಗ ವಿಧೇಯಕಗಳನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

Kannada Bar & Bench
kannada.barandbench.com