[ಚುಟುಕು] ಭೌತಿಕವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದ ಮಾತ್ರಕ್ಕೆ ಕೋವಿಡ್‌ ಪರಿಹಾರ ನಿರಾಕರಿಸುವಂತಿಲ್ಲ: ಬಾಂಬೆ ಹೈಕೋರ್ಟ್

[ಚುಟುಕು] ಭೌತಿಕವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದ ಮಾತ್ರಕ್ಕೆ ಕೋವಿಡ್‌ ಪರಿಹಾರ ನಿರಾಕರಿಸುವಂತಿಲ್ಲ: ಬಾಂಬೆ ಹೈಕೋರ್ಟ್

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬ ಸದಸ್ಯರು ಪರಿಹಾರ ಪಡೆಯುವುದು ಅವರ ಹಕ್ಕಾಗಿದೆ. ಪರಿಹಾರ ಅರ್ಜಿಯನ್ನು ವೆಬ್ ಪೋರ್ಟಲ್ ಮೂಲಕ ಸಲ್ಲಿಸದೆ ಭೌತಿಕವಾಗಿ (ನೇರವಾಗಿ) ಸಲ್ಲಿಸಲಾಗಿದೆ ಎಂಬ ಕಾರಣಕ್ಕೆ ಅವರಿಗೆ ಪರಿಹಾರ ಧನ ನಿರಾಕರಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಸೋಮವಾರ ತಿಳಿಸಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸದೆ ನೇರವಾಗಿ ಪರಿಹಾರ ಅರ್ಜಿ ಸಲ್ಲಿಸಿದವರಿಗೆ ಕೂಡ ₹50,000 ಪಾವತಿಸಬೇಕು ಎಂದು ಕೋರಿ ಸರ್ಕಾರ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಸಲ್ಲಿಸಲಾದ ಮನವಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲಾಗದೆ ಭೌತಿಕವಾಗಿ ಅರ್ಜಿ ಸಲ್ಲಿಸಿದ್ದ 56 ಅರ್ಜಿದಾರರ ಪರವಾಗಿ ಸರ್ಕಾರೇತರ ಸಂಸ್ಥೆಯಾದ ಪ್ರಮೇಯ ಕಲ್ಯಾಣ ಸಂಸ್ಥೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com