ಕರ್ನಾಟಕ ಹೈಕೋರ್ಟ್‌ನಲ್ಲಿ ಕೋವಿಡ್ ಲಸಿಕಾ ಶಿಬಿರದ ಉದ್ಘಾಟನೆ; ನ್ಯಾಯಾಲಯದ 168 ಅಧಿಕಾರಿಗಳಿಗೆ ಲಸಿಕೆ

ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್ ಟಿ ಜಿ ಶಿವಶಂಕರೇಗೌಡ ಅವರು ನ್ಯಾಯಾಲಯದ ಅಧಿಕಾರಿಗಳ ಪೈಕಿ ಮೊದಲಿಗರಾಗಿ ಕೋವಿಡ್‌ ಲಸಿಕೆ ಹಾಕಿಸಿಕೊಂಡರು.
Karnataka HC, Vaccination
Karnataka HC, Vaccination

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಾಗಿ ಹೈಕೋರ್ಟ್‌ ನ್ಯಾಯಮೂರ್ತಿಗಳ ಅಧ್ಯಯನ ಕೊಠಡಿಯಲ್ಲಿ ಸೋಮವಾರ ಕೋವಿಡ್‌ ಲಸಿಕಾ ಶಿಬಿರವನ್ನು ಉದ್ಘಾಟಿಸಲಾಗಿದೆ. ಬೆಳಿಗ್ಗೆ 10 ಗಂಟೆ ವೇಳೆಗೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕಾ ಮತ್ತು ಇತರೆ ನ್ಯಾಯಮೂರ್ತಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್ ಟಿ ಜಿ ಶಿವಶಂಕರೇಗೌಡ ಅವರು ನ್ಯಾಯಾಲಯದ ಅಧಿಕಾರಿಗಳ ಪೈಕಿ ಮೊದಲಿಗರಾಗಿ ಕೋವಿಡ್‌ ಲಸಿಕೆ ಹಾಕಿಸಿಕೊಂಡರು. ನ್ಯಾಯಮೂರ್ತಿಗಳ ಪೈಕಿ ಕೃಷ್ಣ ಎಸ್‌ ದೀಕ್ಷಿತ್‌ ಅವರು ಮೊದಲ ಕೋವಿಡ್‌ ಲಸಿಕೆ ಪಡೆದರು.

Justice Dixit vaccinated
Justice Dixit vaccinated
Also Read
ಕೋವಿಡ್‌ ಲಸಿಕೆ: ನ್ಯಾಯಾಂಗ ಅಧಿಕಾರಿಗಳನ್ನು ಮನವೊಲಿಸಲು ಜಿಲ್ಲಾ ನ್ಯಾಯಾಧೀಶರಿಗೆ ಹೈಕೋರ್ಟ್ ನಿರ್ದೇಶನ

ಸಂಜೆ 5ರ ವರೆಗೂ ಲಸಿಕಾ ಶಿಬಿರ ನಡೆಸಲಾಗಿದ್ದು, ಒಟ್ಟಾರೆ 168 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಮೂಲಗಳು ಬಾರ್‌ ಅಂಡ್‌ ಬೆಂಚ್‌ಗೆ ತಿಳಿಸಿವೆ. ಹಿಂದೆ 45 ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ನ್ಯಾಯಿಕ ಅಧಿಕಾರಿಗಳು ಲಸಿಕೆ ಪಡೆಯುವುದನ್ನು ಜಿಲ್ಲಾ ಮಟ್ಟದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಖಾತರಿಪಡಿಸಬೇಕು ಎಂದು ಸಿ ಜೆ ಓಕಾ ನಿರ್ದೇಶನ ನೀಡಿದ್ದರು. ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ನಿರ್ದೇಶನಗಳನ್ನು ನೀಡಿತ್ತು.

Related Stories

No stories found.
Kannada Bar & Bench
kannada.barandbench.com