[ಕೋವಿಡ್‌ ಸುದ್ದಿ ಸಂಗ್ರಹ] ಕೊರೊನಾ ಸಮಸ್ಯೆಗಳ ಬಗ್ಗೆ ದೇಶದ ನ್ಯಾಯಾಲಯಗಳು ನಿರ್ವಹಿಸಿದ ಪ್ರಕರಣಗಳ ವಿವರ

ಕೊರೊನಾ ಸೋಂಕು ಸೃಷ್ಟಿಸಿರುವ ಸಮಸ್ಯೆಗಳ ಕುರಿತು ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಿಭಿನ್ನ ಮನವಿಗಳು ಸಲ್ಲಿಕೆಯಾಗಿದ್ದು, ಕೆಲವು ಕಡೆ ನ್ಯಾಯಾಲಯಗಳೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿವೆ. ಈ ಕುರಿತ ಮಾಹಿತಿ.
covid vaccine, slum areas
covid vaccine, slum areas

ದೇಶದ ವಿವಿಧ ಹೈಕೋರ್ಟ್‌ಗಳು ಕೊರೊನಾ ಸೋಂಕು ಸೃಷ್ಟಿಸಿರುವ ತಲ್ಲಣದಿಂದ ಜನ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಕಿವಿಯಾಗುವ ಪ್ರಯತ್ನ ಮಾಡುತ್ತಿವೆ. ವಿಚಾರಣೆಗಳನ್ನು ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಿವಿ ಹಿಂಡುವ ಕೆಲಸವನ್ನು ನಿರಂತರವಾಗಿ ನಡೆಸಿವೆ. ಕೊರೊನಾ ಪರಿಸ್ಥಿತಿಯ ಕುರಿತು ಇಂದು ನಡೆದ ಪ್ರಮುಖ ಪ್ರಕರಣಗಳ ವಿಚಾರಣೆಯ ಕುರಿತ ಸಂಕ್ಷಿಪ್ತ ನೋಟ ಇಲ್ಲಿದೆ.

ಲಸಿಕೆ ಕೇಂದ್ರಗಳಲ್ಲಿ ಜನದಟ್ಟಣೆ‌ ಕೋವಿಡ್‌ ಸೋಂಕು ಸ್ಫೋಟಕ್ಕೆ ಕಾರಣವಾಗಬಹುದು: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್

ಕೇರಳದ ಕೋವಿಡ್‌ ಲಸಿಕಾ ಕೇಂದ್ರಗಳಲ್ಲಿ ಜನಸಂಖ್ಯಾ ದಟ್ಟಣೆ ಕುರಿತಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಹೈಕೋರ್ಟ್‌ ಇದನ್ನು ತಡೆಯುವ ಕುರಿತಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಅನಿಯಂತ್ರಿತವಾಗಿ ಜನದಟ್ಟಣೆಗೆ ಅನುಮತಿ ನೀಡಿದರೆ ಕೋವಿಡ್‌ ತಡೆಯಬೇಕಾದ ಲಸಿಕೆ ಕೇಂದ್ರಗಳು ಸೋಂಕಿನ ಮಹಾಸ್ಫೋಟದ ನೆಲೆಯಾಗುತ್ತವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಲಸಿಕಾ ಕೇಂದ್ರಗಳಲ್ಲಿ ಜನದಟ್ಟಣೆ ಹೆಚ್ಚಳ ಬಗ್ಗೆ ಪ್ರಕಟವಾದ ಪತ್ರಿಕಾ ವರದಿಗಳನ್ನು ಆಧರಿಸಿ ನ್ಯಾಯಾಲಯ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

Kerala High Court
Kerala High Court

ಕೇರಳದ ಕೋವಿಡ್‌ ಲಸಿಕಾ ಕೇಂದ್ರಗಳಲ್ಲಿ ಜನಸಂಖ್ಯಾ ದಟ್ಟಣೆ ಕುರಿತಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಹೈಕೋರ್ಟ್‌ ಇದನ್ನು ತಡೆಯುವ ಕುರಿತಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಅನಿಯಂತ್ರಿತವಾಗಿ ಜನದಟ್ಟಣೆಗೆ ಅನುಮತಿ ನೀಡಿದರೆ ಕೋವಿಡ್‌ ತಡೆಯಬೇಕಾದ ಲಸಿಕೆ ಕೇಂದ್ರಗಳು ಸೋಂಕಿನ ಮಹಾಸ್ಫೋಟದ ನೆಲೆಯಾಗುತ್ತವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಲಸಿಕಾ ಕೇಂದ್ರಗಳಲ್ಲಿ ಜನದಟ್ಟಣೆ ಹೆಚ್ಚಳ ಬಗ್ಗೆ ಪ್ರಕಟವಾದ ಪತ್ರಿಕಾ ವರದಿಗಳನ್ನು ಆಧರಿಸಿ ನ್ಯಾಯಾಲಯ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಸೆಂಟ್ರಲ್‌ ವಿಸ್ತಾ ಕಾಮಗಾರಿಯಿಂದ ಸೋಂಕು ಹೆಚ್ಚಳ ಸಾಧ್ಯತೆ, ಅದು ಅಗತ್ಯ ಸೇವೆ ಅಲ್ಲ: ದೆಹಲಿ ಹೈಕೋರ್ಟ್‌ಗೆ ಅರ್ಜಿ

ದೆಹಲಿಯಲ್ಲಿ ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿರುವ ನೂತನ ಸಂಸತ್‌ ಭವನ ಮತ್ತು ಸುತ್ತಲಿನ ಪ್ರದೇಶಾಭಿವೃದ್ಧಿಗೆ ಸಂಬಂಧಿಸಿದ ಸೆಂಟ್ರಲ್‌ ವಿಸ್ತಾ ಕಾಮಗಾರಿಯಿಂದ ಕೊರೊನಾ ಅಗಾಧ ಪ್ರಮಾಣದಲ್ಲಿ ಹರಡಬಹುದಾಗಿದ್ದು ಈ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ವಿವಿಧ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಇದೊಂದು ಅಗತ್ಯ ಸೇವೆ ಅಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ,

Central Vista
Central Vista

ಅಲ್ಲದೆ ಕಾಮಗಾರಿಯಲ್ಲಿ ತೊಡಗಿರುವವರಿಗೆ ಅಗತ್ಯ ಸೇವೆಯಲ್ಲಿ ನಿರತರು ಎಂಬ ಪಾಸ್‌ ಒದಗಿಸಲು ಮುಂದಾಗಿರುವ ದೆಹಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಲಾಗಿದೆ. ಕಾರ್ಮಿಕರನ್ನೂ ಒಳಗೊಂಡಂತೆ ದೆಹಲಿಯ ನಾಗರಿಕರ ಮೇಲೆ ಕೋವಿಡ್‌ ಸಂದರ್ಭದಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ದೂರಲಾಗಿದೆ. ಆದರೆ ಪ್ರಕರಣವನ್ನು ಆಲಿಸುವ ಮೊದಲು ಯೋಜನೆಗೆ ಹಸಿರು ನಿಶಾನೆ ತೋರಿದ ಸುಪ್ರೀಂಕೋರ್ಟ್‌ ಆದೇಶವನ್ನು ಅಧ್ಯಯನ ಮಾಡುವುದಾಗಿ ಹೈಕೋರ್ಟ್‌ ಹೇಳಿದೆ. ಮೇ 17ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಕೋವಿಡ್‌: ಸಮಾಜದ ಕೆಳಸ್ತರದಲ್ಲಿರುವವರಿಗೆ ಸೂಕ್ತ ಪರಿಹಾರ ನೀಡುವ ಸಂಬಂಧ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ಕೋವಿಡ್‌ ಬಿಕ್ಕಟ್ಟಿನಿಂದಾಗಿ ಜೀವನ ನಡೆಸಲು ಕಷ್ಟಪಡುತ್ತಿರುವ ಸಮಾಜದ ಕೆಳಸ್ತರದ ಜನರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಚನಾತ್ಮಕವಾಗಿ ಸ್ಪಂದಿಸುವಂತೆ ದೆಹಲಿಯ ಆಡಳಿತಶಾಹಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಸೂಚಿಸಿದೆ. ನ್ಯಾಯಮೂರ್ತಿಗಳಾದ ಮನಮೋಹನ್‌ ಮತ್ತು ಆಶಾ ಮೆನನ್‌ ಅವರಿದ್ದ ಪೀಠ ಗೃಹಾಧಾರಿತ ಕಾರ್ಮಿಕರು, ಸ್ವಯಂ ಉದ್ಯೋಗದಲ್ಲಿ ನಿರತರಾದವರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯಿದೆಯಡಿ ಎರಡು ವಾರಗಳಲ್ಲಿ ಯೋಜನೆಯೊಂದನ್ನು ಸಿದ್ಧಪಡಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

Migrants in Calcutta
Migrants in Calcutta

ಕಾಯಿದೆಯ ಸೆಕ್ಷನ್ 10ರ ಅಡಿಯಲ್ಲಿ ದೆಹಲಿಯ ಎಲ್ಲಾ ವಲಸೆ ಕಾರ್ಮಿಕರನ್ನು ನೋಂದಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸಾಂಕ್ರಾಮಿಕ ರೋಗದ ಅಗಾಧತೆ ಪರಿಗಣಿಸಿ ಚುನಾಯಿತ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಧಾರ್ಮಿಕ ಕೇಂದ್ರಗಳನ್ನು ಪರಿಹಾರ ಕಾರ್ಯದಲ್ಲಿ ಒಳಗೊಳ್ಳಲು ಸಾಧ್ಯವೇ ಎಂದು ತೀರ್ಮಾನಿಸುವಂತೆ ಸೂಚಿಸಿದೆ. ಮೇ 20ಕ್ಕೆ ಪ್ರಕರಣದ ಮುಂದಿನ ವಿಚಾರಣೆ ನಿಗದಿಯಾಗಿದೆ.

ವಕೀಲರ ಕರ್ತವ್ಯವನ್ನು ಅಗತ್ಯ ಸೇವೆಯೆಂದು ಪರಿಗಣಿಸಲು ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

ಕೋವಿಡ್‌ ನಡುವೆಯೂ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಕೀಲರು ಮತ್ತು ವಕೀಲ ಗುಮಾಸ್ತರ ಕೆಲಸವನ್ನು ಅಗತ್ಯ ಸೇವೆಯೆಂದು ಪರಿಗಣಿಸಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸಾಂಕ್ರಾಮಿಕ ಸಮಯದಲ್ಲಿ ವಕೀಲರು ತಮ್ಮ ಮನೆಗಳಿಂದ ನ್ಯಾಯಾಲಯಗಳಿಗೆ ಪ್ರಯಾಣಿಸುವಾಗ ಎದುರಾಗುವ ತೊಂದರೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Kerala High Court
Kerala High Court

ಆಲ್ ಇಂಡಿಯಾ ಅಸೋಸಿಯೇಷನ್ ​​ಆಫ್ ಜ್ಯೂರಿಸ್ಟ್ಸ್ ಮತ್ತು ವಕೀಲರೊಬ್ಬರು ಸಲ್ಲಿಸಿದ ಅರ್ಜಿಯಲ್ಲಿ ಸಮುದಾಯಕ್ಕೆ ವಕೀಲರ ಸೇವೆ ಅಗತ್ಯವಾಗಿದ್ದು ನ್ಯಾಯಾಡಳಿತದಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಸಂವಿಧಾನದ 21 ನೇ ವಿಧಿಯಡಿ ಮೂಲಭೂತ ಹಕ್ಕಾಗಿರುವ ನ್ಯಾಯವನ್ನು ಒದಗಿಸಲು ಶ್ರಮಿಸುತ್ತಾರೆ ಎಂದು ವಿವರಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com