ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಎಪಿ ಮಾಜಿ ಕೌನ್ಸಿಲರ್ ತಾಹಿರ್‌ಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ [ಚುಟುಕು]

Delhi Riots

Delhi Riots

Published on

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮಾಜಿ ಕೌನ್ಸಿಲರ್‌ ತಾಹಿರ್ ಹುಸೇನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ. ಪಿಎಂಎಲ್‌ಎ ಸೆಕ್ಷನ್ 45(1)ರ ಅಡಿಯಲ್ಲಿ ಜಾಮೀನು ಮಂಜೂರಾತಿ ಮೇಲಿನ ನಿರ್ಬಂಧದ ದೃಷ್ಟಿಯಿಂದ, ಅರ್ಜಿದಾರರು ತಪ್ಪಿತಸ್ಥರಲ್ಲ ಅಥವಾ ಅವರು ತಪ್ಪು ಮಾಡುವುದಿಲ್ಲ ಎಂದು ಹೇಳಲಾಗದು. ಜಾಮೀನಿನ ಮೇಲೆ ಬಿಡುಗಡೆಗೊಂಡಾಗ ಅಂತಹ ಯಾವುದೇ ಅಪರಾಧ ಮಾಡುವ ಸಾಧ್ಯತೆ ಇದೆ ಎಂಬುದಾಗಿ ಕಡ್‌ಕಡ್‌ಡೂಮ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅಭಿಪ್ರಾಯಪಟ್ಟಿದ್ದಾರೆ. ಪೌರತ್ವ ತಿದ್ದುಪಡಿ ಕಾಯಿದೆ- ಸಿಎಎ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಗಾಗಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು ಎಂಬುದು ತಾಹಿರ್‌ ಅವರ ಮೇಲಿರುವ ಆರೋಪ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com