
ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು ತಮ್ಮ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ ಡಿ) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಗುರುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇ ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜುಲೈ 3 ರಂದು ಸಿಸೋಡಿಯಾ ಅವರಿಗೆ ಜಾಮೀನು ನಿರಾಕರಿಸಿತ್ತು.
ಅದಕ್ಕೂ ಮೊದಲು, ಇದೇ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಅದು ತಿರಸ್ಕರಿಸಿತ್ತು.
ಅಬಕಾರಿ ನೀತಿಯನ್ನು ತಿರುಚಿ ಕೆಲ ವ್ಯಾಪಾರಿಗಳಿಗೆ ಲಾಭವಾಗುವಂತೆ ಬದಲಿಸಿ ಪ್ರತಿಯಾಗಿ ಕಿಕ್ ಬ್ಯಾಕ್ ಪಡೆಯಲಾಯಿತು ಎಂಬುದು ಕೇಂದ್ರೀಯ ತನಿಖಾ ಸಂಸ್ಥೆಗಳ ವಾದವಾಗಿದೆ.