ಭಾರತೀಯ ಟೇಬಲ್ ಟೆನಿಸ್ ಒಕ್ಕೂಟ ನಿರ್ವಹಣೆಗೆ ನ್ಯಾ. ಮಿತ್ತಲ್ ನೇತೃತ್ವದ ಸಮಿತಿ ರಚಿಸಿದ ದೆಹಲಿ ಹೈಕೋರ್ಟ್ [ಚುಟುಕು]

Justice Gita Mittal

Justice Gita Mittal

Published on

ಒಲಂಪಿಕ್ ಅರ್ಹತಾ ಪಂದ್ಯಗಳಲ್ಲಿ ರಾಷ್ಟ್ರೀಯ ಕೋಚ್ ಮ್ಯಾಚ್ ಫಿಕ್ಸಿಂಗ್‌ನಲ್ಲಿ ತೊಡಗಿದ್ದಾರೆ ಎಂದು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಆರು ತಿಂಗಳ ಕಾಲ ಭಾರತೀಯ ಟೇಬಲ್‌ ಟೆನಿಸ್‌ ಒಕ್ಕೂಟದ (ಟಿಟಿಎಫ್‌ಐ) ಕಾರ್ಯಕಾರಿ ಸಮಿತಿಯನ್ನು ಅಮಾನತಿನಲ್ಲಿರಿಸಿದೆ. ಒಕ್ಕೂಟದ ನಿರ್ವಹಣೆಗಾಗಿ ನಿವೃತ್ತ ನ್ಯಾಯಮೂರ್ತಿ ಗೀತಾ ಮಿತ್ತಲ್‌ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ನ್ಯಾ. ರೇಖಾ ಪಲ್ಲಿ ಅವರಿದ್ದ ಏಕ ಸದಸ್ಯ ಪೀಠ ರಚಿಸಿದೆ.

ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ತನ್ನ ಖಾಸಗಿ ಅಕಾಡೆಮಿಯಲ್ಲಿ ವೈಯಕ್ತಿಕ ತರಬೇತಿ ಪಡೆಯುತ್ತಿರುವ ಆಟಗಾರರೊಬ್ಬರಿಗಾಗಿ ಮ್ಯಾಚ್ ಫಿಕ್ಸಿಂಗ್ ಮಾಡಲು ರಾಷ್ಟ್ರೀಯ ಕೋಚ್ ಸೌಮ್ಯದೀಪ್ ರಾಯ್ ಬಲವಂತಪಡಿಸಿದ್ದಾರೆ ಎಂದು ಆರೋಪಿಸಿ ಟೇಬಲ್ ಟೆನಿಸ್ ತಾರೆ ಮಣಿಕಾ ಬಾತ್ರಾ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com