ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಮತ್ತು ಇ ಡಿ ಪ್ರಕರಣಗಳಲ್ಲಿ ಕವಿತಾಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಈ ಆದೇಶ ಹೊರಡಿಸಿದ್ದಾರೆ.
BRS leader K KavithaX
BRS leader K KavithaX
Published on

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇ ಡಿ ಎರಡೂ ದಾಖಲಿಸಿದ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಇಂದು ಈ ಆದೇಶ ಹೊರಡಿಸಿದ್ದಾರೆ.

ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನಲ್ಲಿ ಇ ಡಿ ಬಂಧಿಸಿತ್ತು. ನಂತರ ಸಿಬಿಐ ಅವರನ್ನು ಏಪ್ರಿಲ್ 11ರಂದು ವಶಕ್ಕೆ ಪಡೆದಿತ್ತು.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಲಂಚ ಸ್ವೀಕಾರ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಆಕೆ ಭಾಗಿಯಾಗಿದ್ದಾರೆ ಎಂದು ಸಿಬಿಐ ಮತ್ತು ಇ ಡಿ ಆರೋಪಿಸಿದ್ದವು.

ಸಿಬಿಐ ಮತ್ತು ಇಡಿ ಎರಡೂ ಪ್ರಕರಣಗಳಲ್ಲಿ ಕೆ ಕವಿತಾ ಅವರ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು ಮೇ 6ರಂದು ತಿರಸ್ಕರಿಸಿತ್ತು.

ಇದೇ ಪ್ರಕರಣದಲ್ಲಿ ಇಡೀ ಎಎಪಿ ಪಕ್ಷ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪಕ್ಷದ ಸಂಸದ ಸಂಜಯ್ ಸಿಂಗ್ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಗಳಾಗಿದ್ದಾರೆ. 

Kannada Bar & Bench
kannada.barandbench.com