ದೆಹಲಿ ಏರ್‌ಪೋರ್ಟ್‌ ಮೆಟ್ರೋ ಒಪ್ಪಂದ ಸಿಬಿಐ ತನಿಖೆಗೆ: ವಕೀಲ ಶರ್ಮಾ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್ [ಚುಟುಕು]

ದೆಹಲಿ ಏರ್‌ಪೋರ್ಟ್‌ ಮೆಟ್ರೋ ಒಪ್ಪಂದ ಸಿಬಿಐ ತನಿಖೆಗೆ: ವಕೀಲ ಶರ್ಮಾ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್ [ಚುಟುಕು]

ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ಮತ್ತು ಅನಿಲ್ ಅಂಬಾನಿ ಒಡೆತನದ ದೆಹಲಿ ಏರ್‌ಪೋರ್ಟ್ ಮೆಟ್ರೋ ನಡುವಿನ 2008ರ ಒಪ್ಪಂದದ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಮನಮೋಹನ್ ಮತ್ತು ಸುಧೀರ್ ಕುಮಾರ್ ಜೈನ್ ಅವರಿದ್ದ ವಿಭಾಗೀಯ ಪೀಠ “ಅಪರೂಪದ ಪ್ರಕರಣಗಳಲ್ಲಿ ಮಾತ್ರ ಸಿಬಿಐ ತನಿಖೆಗೆ ಆದೇಶಿಸಬಹುದು. ಆದರೆ ಸಿಬಿಐಗೆ ದೂರು ಸಲ್ಲಿಸಿದ ಎರಡು ದಿನಗಳಲ್ಲೇ ವಕೀಲ ಶರ್ಮಾ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.