ಸರ್ಕಾರಿ ಅಧಿಕಾರಿಗಳ ವಿರುದ್ಧದ ಗಂಭೀರ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಹಿಂದಿನ ಆದೇಶಗಳನ್ನು ಪಾಲಿಸಲು ವಿಫಲವಾದ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಬುಧವಾರ ₹ 50,000 ದಂಡ ವಿಧಿಸಿದೆ. ಮೋಸ, ಪಿತೂರಿ, ಭ್ರಷ್ಟಾಚಾರಗಳ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಸಾರ್ವಜನಿಕ ಅಧಿಕಾರಿಗಳ ವಿರುದ್ಧದ ಪ್ರಕರಣ ಇದಾಗಿದೆ. ವಿಚಾರಣೆ ನಡೆಸಿದ ನ್ಯಾ. ಸುಬ್ರಮಣ್ಯ ಪ್ರಸಾದ್ ಸರ್ಕಾರವು ನ್ಯಾಯಾಲಯವನ್ನು ಲಘುವಾಗಿ ಪರಿಗಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿಂದೆ, ಅಕ್ಟೋಬರ್ 2021ರಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಲ್ಲಿ ವಿಳಂಬಧೋರಣೆ ಅನುಸುತ್ತಿರುವ ಕೇಂದ್ರ ಸರ್ಕಾರದ ಬಗ್ಗೆ ನ್ಯಾಯಾಲಯ ಬೇಸರಿಸಿತ್ತು. ಪ್ರಸ್ತುತ ವಿಚಾರಣೆಯಲ್ಲಿ ವಿಳಂಬಕ್ಕೆ ಕಾರಣವಾದ ಅಧಿಕಾರಿಯ ಹೊಣೆಗಾರಿಕೆಯನ್ನು ನಿಗದಿಪಡಿಸಲು ದಂಡ ವಿಧಿಸಿರುವುದಾಗಿ ನ್ಯಾಯಾಲಯವು ಆದೇಶದಲ್ಲಿ ತಿಳಿಸಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.