Sharjeel Imam

Sharjeel Imam

ಶಾರ್ಜೀಲ್‌ ಇಮಾಮ್‌ ವಿರುದ್ಧ ಆರೋಪ ನಿಗದಿ: ಆಕ್ಷೇಪಣೆ ಸಲ್ಲಿಸಲು ದೆಹಲಿ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್‌ [ಚುಟುಕು]

Published on

ರಾಷ್ಟ್ರದ್ರೋಹ ಮತ್ತು ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಅಡಿ ತನ್ನ ವಿರುದ್ಧ ಆರೋಪ ನಿಗದಿ ಮಾಡಿರುವ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜೀಲ್‌ ಇಮಾಮ್‌ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್‌ ಮ್ರಿದುಲ್‌ ಮತ್ತು ಎ ಕೆ ಮೆಂಡಿರಟ್ಟ ಅವರಿದ್ದ ವಿಭಾಗೀಯ ಪೀಠವು ಆಕ್ಷೇಪಣೆ ಸಲ್ಲಿಸಲು ದೆಹಲಿ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.

ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com