ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪನೆ: ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಪ್ರಕರಣ ನೀತಿ ನಿರೂಪಣೆ ವ್ಯಾಪ್ತಿಗೆ ಒಳಪಡುವುದರಿಂದ ನ್ಯಾಯಾಲಯ ಮಧ್ಯಪ್ರವೇಶಿಸಲಾಗದು ಎಂದು ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ಪೀಠ ತಿಳಿಸಿದೆ.
Temple
TempleImage for representative purposes
Published on

ಹಿಂದೂ ಧರ್ಮದ ರಕ್ಷಣೆಗಾಗಿ ವಕ್ಫ್ ಬೋರ್ಡ್ ರೀತಿ ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಪ್ರಕರಣ ನೀತಿ ನಿರೂಪಣೆ ವ್ಯಾಪ್ತಿಗೆ ಒಳಪಡುವುದರಿಂದ ನ್ಯಾಯಾಲಯ ಮಧ್ಯಪ್ರವೇಶಿಸಲಾಗದು ಎಂದು ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ಪೀಠ ತಿಳಿಸಿದೆ.

Also Read
'ಜಾತಿ ರಹಿತ- ಧರ್ಮ ರಹಿತ ಪ್ರಜೆ' ಪ್ರಮಾಣಪತ್ರ ನೀಡಲು ಜಿಲ್ಲಾಡಳಿತಕ್ಕೆ ಅಧಿಕಾರವಿಲ್ಲ: ಮದ್ರಾಸ್ ಹೈಕೋರ್ಟ್

ಈ ವಿಚಾರವಾಗಿ ನ್ಯಾಯಾಲಯ ಏನೂ ಮಾಡಲು ಸಾಧ್ಯವಿಲ್ಲ ಎಂದ ನ್ಯಾಯಮೂರ್ತಿ ಮನಮೋಹನ್‌ ಸೂಕ್ತ ಕ್ರಮಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಅರ್ಜಿದಾರರು ಮುಕ್ತರು ಎಂದು ತಿಳಿಸಿ ಅರ್ಜಿ ವಿಲೇವಾರಿ ಮಾಡಿತು.

Also Read
ಹಿಂದುತ್ವ ಐಸಿಸ್ ಹೋಲಿಕೆ: ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ದಾಖಲಿಸಲು ಯುಪಿ ನ್ಯಾಯಾಲಯ ಆದೇಶ

ಸನಾತನ ಧರ್ಮದ ಅನುಯಾಯಿಗಳ ಮೇಲೆ ಇತರ ಧರ್ಮದ ಅನುಯಾಯಿಗಳು ಹಲ್ಲೆ ನಡೆಸುತ್ತಿದ್ದಾರೆ. ಸನಾತನ ಧರ್ಮದ ಹಕ್ಕುಗಳು ಮತ್ತು ಆಚಾರಗಳ ರಕ್ಷಣೆಗೆ ಯಾವುದೇ ಧಾರ್ಮಿಕ ಸಂಸ್ಥೆ ಇಲ್ಲ ಆದ್ದರಿಂದ ಅಂತಹ ಸಂಸ್ಥೆ ರಚಿಸುವಂತೆ  ಸನಾತನ ಹಿಂದೂ ಸೇವಾ ಸಂಘ ಟ್ರಸ್ಟ್‌ ಕೋರಿತ್ತು.

ಸರ್ಕಾರಕ್ಕೆ ಈ ಸಂಬಂಧ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ದೊರೆಯದೆ ಇದ್ದುದರಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಯಿತು ಎಂದು ಸಂಘ ತಿಳಿಸಿತ್ತು.

Kannada Bar & Bench
kannada.barandbench.com