ಉಮರ್ ಖಾಲಿದ್ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನ್ಯಾ. ಸಿದ್ಧಾರ್ಥ್ ಮೃದುಲ್ ಮತ್ತು ರಜನೀಶ್ ಭಟ್ನಾಗರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
Umar Khalid
Umar Khalid

ದೆಹಲಿ ಗಲಭೆಗಳ ಪಿತೂರಿ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್‌ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ [ಉಮರ್ ಖಾಲಿದ್ ಮತ್ತು ದೆಹಲಿ ಸರ್ಕಾರ ನಡುವಣ ಪ್ರಕರಣ].

ನ್ಯಾ. ಸಿದ್ಧಾರ್ಥ್ ಮೃದುಲ್ ಮತ್ತು ನ್ಯಾ. ರಜನೀಶ್ ಭಟ್ನಾಗರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. "ಜಾಮೀನು ಮನವಿಯಲ್ಲಿ ನಮಗೆ ಯಾವುದೇ ಅರ್ಹತೆ ಕಂಡುಬಂದಿಲ್ಲ, ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ" ಎಂದು ನ್ಯಾಯಾಲಯ ತಿಳಿಸಿದೆ. ತೀರ್ಪಿನ ವಿವರಗಳು ಇನ್ನಷ್ಟೇ ದೊರೆಯಬೇಕಿದೆ.

ಹಿರಿಯ ವಕೀಲ ತ್ರಿದೀಪ್ ಪೈಸ್ ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರ ವಾದವನ್ನು ಆಲಿಸಿದ ನ್ಯಾಯಾಲಯ ಸೆಪ್ಟೆಂಬರ್ 9 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಹೈಕೋರ್ಟ್‌ನಲ್ಲಿ 20 ದಿನಗಳಿಗೂ ಹೆಚ್ಚು ಕಾಲ ವಾದಗಳು ನಡೆದಿದ್ದವು.

ಈ ವರ್ಷದ ಮಾರ್ಚ್‌ನಲ್ಲಿ ದೆಹಲಿಯ ಕಡ್‌ಕಡ್‌ಡೂಮಾ ನ್ಯಾಯಾಲಯ ಖಾಲಿದ್‌ ಅವರ ಜಾಮೀನು ಅರ್ಜಿ ವಜಾಗೊಳಿಸಿತ್ತು.  ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಅವರನ್ನು 2020ರ ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದ ದೆಹಲಿ ಪೊಲೀಸರು  ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ ಸೇರಿಸಿದ ಆರೋಪ ಹೊರಿಸಿದ್ದರು ಹಾಗೂ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯ (ಯುಎಪಿಎ) ಹಲವಾರು ಸೆಕ್ಷನ್‌ಗಳಡಿ ಆರೋಪ ಹೊರಿಸಿದ್ದರು. ಅಂದಿನಿಂದ ಖಾಲಿದ್‌ ಜೈಲಿನಲ್ಲಿದ್ದಾರೆ.

Related Stories

No stories found.
Kannada Bar & Bench
kannada.barandbench.com