ವಕ್ಫ್ ಕಾಯಿದೆ-1995ರ ನಿಯಮಾವಳಿಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ ಹಾಗೂ ದೇಶದ ಕಾನೂನು ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ (ಎಸಿಜೆ) ವಿಪಿನ್ ಸಾಂಘಿ ಮತ್ತು ನ್ಯಾ. ನವೀನ್ ಚಾವ್ಲಾ ಅವರಿದ್ದ ವಿಭಾಗೀಯ ಪೀಠ ಸೂಚಿಸಿತು.
ವಕ್ಫ್ ಕಾಯಿದೆಯನ್ನು ವಕ್ಫ್ ಆಸ್ತಿಗಳ ನಿರ್ವಹಣೆಗಾಗಿ ರಚಿಸಲಾಗಿದೆ ಆದರೆ ಇತರ ಧರ್ಮಗಳ ಅನುಯಾಯಿಗಳಿಗೆ ಇಂತಹ ಯಾವುದೇ ರೀತಿಯ ಕಾನೂನುಗಳಿಲ್ಲ ಎಂದು ಉಪಾಧ್ಯಾಯ ಮನವಿಯಲ್ಲಿ ಆಕ್ಷೇಪಿಸಿದ್ದರು.