ದೃಷ್ಟಿಹೀನರಿಗೆ ಡಿಜಿಟಲ್ ಬ್ಯಾಂಕಿಂಗ್: ಆರ್‌ಬಿಐ, ಐಐಟಿ, ಕೇಂದ್ರದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್ [ಚುಟುಕು]

ದೃಷ್ಟಿಹೀನರಿಗೆ ಡಿಜಿಟಲ್ ಬ್ಯಾಂಕಿಂಗ್: ಆರ್‌ಬಿಐ, ಐಐಟಿ, ಕೇಂದ್ರದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್ [ಚುಟುಕು]
Reserve Bank of India

ಆನ್‌ಲೈನ್ ಮತ್ತು ತಂತ್ರಜ್ಞಾನ ಆಧಾರಿತ ಬ್ಯಾಂಕಿಂಗ್ ಸೇವೆ ಪಡೆಯಲು ದೃಷ್ಟಿ ವಿಕಲಚೇತನರಿಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಆರ್‌ಬಿಐ, ಐಐಟಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ದೃಷ್ಟಿಹೀನರು ಬ್ಯಾಂಕಿಂಗ್‌ ಸೇವೆಗಳನ್ನುಪಡೆಯಲು ಸೂಕ್ತ ನಿಯಮಾವಳಿಗಳನ್ನು ರೂಪಿಸಲು ಕೋರಿ ಸಮಿತಿಯೊಂದನ್ನು ರಚಿಸುವಂತೆಯೂ ಸಾಮಾಜಿಕ ಕಾರ್ಯಕರ್ತ ಜಾರ್ಜ್‌ ಅಬ್ರಾಹಂ ಅವರು ಸಲ್ಲಿಸಿದ ಮನವಿಯಲ್ಲಿ ಕೋರಲಾಗಿದೆ.

ಎಟಿಎಂಗಳು, ಡಿಜಿಟಲ್ ಪಾವತಿ ವಾಲೆಟ್‌ಗಳು ಮತ್ತು ಬ್ಯಾಂಕಿಂಗ್ ಅಪ್ಲಿಕೇಶನ್‌ಗಳನ್ನು ಬಳಸಲು ಲಕ್ಷಾಂತರ ಅಂಧರಿಗೆ ಸಾಧ್ಯವಾಗುತ್ತಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಮುಖ್ಯ ನ್ಯಾಯಮೂರ್ತಿಗಳಾದ ವಿಪಿನ್‌ ಸಾಂಘಿ ಮತ್ತು ನವೀನ್‌ ಚಾವ್ಲಾ ಅವರ ಪೀಠವು ಪ್ರಕರಣವನ್ನು ಆಲಿಸಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.