ಬಿಜೆಪಿ ನಾಯಕನ ದೂರಿನ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿಗೆ ನೀಡಲಾಗಿದ್ದ ಸಮನ್ಸ್‌ಗೆ ದೆಹಲಿ ಹೈಕೋರ್ಟ್ ತಡೆ

ಸಾಹಿಬಾಬಾದ್ ಮತ್ತು ಚಾಂದಿನಿ ಚೌಕ್ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಸುನೀತಾ ಕೇಜ್ರಿವಾಲ್ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಹರೀಶ್ ಖುರಾನಾ ಆರೋಪಿಸಿದ್ದರು.
Sunita Kejriwal
Sunita Kejriwal Twitter
Published on

ಎರಡು ಬೇರೆ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸುವ ಮೂಲಕ 1951ರ ಜನಪ್ರತಿನಿಧಿ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ನೀಡಲಾಗಿದ್ದ ಸಮನ್ಸ್‌ಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ.

ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಆದೇಶ ಹೊರಡಿಸಿದ್ದು ವಿಚಾರಣಾ ನ್ಯಾಯಾಲಯದ ಆದೇಶದ ಮೇಲಿನ ತಡೆಯಾಜ್ಞೆ ಫೆಬ್ರವರಿ 1, 2024 ರವರೆಗೆ ಜಾರಿಯಲ್ಲಿರುತ್ತದೆ. ನಂತರ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದರು.

Also Read
ಎರಡು ವೋಟರ್ ಐಡಿ ಹೊಂದಿದ ಆರೋಪ: ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾಗೆ ದೆಹಲಿ ನ್ಯಾಯಾಲಯ ಸಮನ್ಸ್

"ಪ್ರತಿವಾದಿಗಳಿಗೆ ನೋಟೀಸ್ ನೀಡಿ. ಈ ಮಧ್ಯೆ, ಮುಂದಿನ ವಿಚಾರಣೆ ದಿನದವರೆಗೆ ಆಕ್ಷೇಪಿತ ಆದೇಶಕ್ಕೆ ತಡೆಯಾಜ್ಞೆ ಇರುತ್ತದೆ" ಎಂದು ಪೀಠ ಆದೇಶಿಸಿದೆ.

ತೀಸ್ ಹಜಾರಿ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು ಆಗಸ್ಟ್ 29, 2023 ರಂದು ಸುನೀತಾ ಕೇಜ್ರಿವಾಲ್‌ಗೆ ಸಮನ್ಸ್ ಜಾರಿ ಮಾಡಿದ್ದರು. ದೆಹಲಿ ಬಿಜೆಪಿ ನಾಯಕ ಹರೀಶ್ ಖುರಾನಾ ಸಲ್ಲಿಸಿದ್ದ ಮನವಿ ಹಿನ್ನೆಲೆಯಲ್ಲಿ ಆದೇಶ ನೀಡಲಾಗಿತ್ತು.

ಖುರಾನಾ ಅವರು 2019 ರಲ್ಲಿ ಸುನೀತಾ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಿದ್ದರು. ಸಾಹಿಬಾಬಾದ್ ಮತ್ತು ಚಾಂದಿನಿ ಚೌಕ್ ಎರಡೂ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಸುನೀತಾ ಕೇಜ್ರಿವಾಲ್ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಹರೀಶ್‌ ಖುರಾನಾ ಆರೋಪಿಸಿದ್ದರು.

Kannada Bar & Bench
kannada.barandbench.com