ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಶಾರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರು ವಿಚಾರಣಾಧೀನ ನ್ಯಾಯಾಲಯಗಳು ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮೇ 6ರಂದು ನಡೆಸಲಾಗುವುದು ಎಂದು ಶುಕ್ರವಾರ ದೆಹಲಿ ಹೈಕೋರ್ಟ್ ಹೇಳಿದೆ.
ಐಪಿಸಿ ಸೆಕ್ಷನ್ 124ಎ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಮನವಿಗಳ ಸುಪ್ರೀಂ ಕೋರ್ಟ್‌ನಲ್ಲಿ ಮೇ 5ರಂದು ವಿಚಾರಣೆಗೆ ಬರಲಿವೆ. ಸದರಿ ಪ್ರಕರಣವು ಈ ಪ್ರಕರಣದ ಮೇಲೂ ಪ್ರಭಾವ ಬೀರಲಿದೆ. ಹೀಗಾಗಿ, ಸುಪ್ರೀಂ ವಿಚಾರಣೆಯ ಬಳಿಕ ಈ ಮನವಿಗಳ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ರಜ್ನೀಶ್ ಭಟ್ನಾಗರ್ ಅವರ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.