![ದೆಹಲಿ ಗಲಭೆ: ರಾಜಕಾರಣಿಗಳು ಹಾಗೂ ಬಾಂಬೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗೆ ದೆಹಲಿ ಹೈಕೋರ್ಟ್ ನೋಟಿಸ್ [ಚುಟುಕು]](http://media.assettype.com/barandbench-kannada%2F2022-02%2Fd175a930-bb59-42b6-bb97-f15d930a0641%2Fbarandbench_2022_02_236a82f2_0de4_4c43_82b6_aee10b0b1ec4_18__1_.jpg?w=480&auto=format%2Ccompress&fit=max)
ದೆಹಲಿ ಗಲಭೆಗೆ ಸಂಬಂಧಿಸಿದ ದ್ವೇಷ ಭಾಷಣ ಪ್ರಕರಣದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಭಾರತೀಯ ಜನತಾ ಪಕ್ಷದ ನಾಯಕರಾದ ಕಪಿಲ್ ಮಿಶ್ರಾ ಮತ್ತು ಪ್ರವೇಶ್ ಸಾಹೇಬ್ ಸಿಂಗ್ ವರ್ಮಾ, ಅವರನ್ನು ಪಕ್ಷಕಾರರನ್ನಾಗಿ ಮಾಡಿಕೊಳ್ಳಬೇಕೆಂದು ಜಾಮಿಯಾತ್ ಉಲಾಮಾ-ಇ-ಹಿಂದ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಾಮಾಜಿಕ ಕಾರ್ಯಕರ್ತ ಹರ್ಷ್ ಮಂದರ್, ಬಾಂಬೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ ಜಿ ಕೋಲ್ಸೆ ಪಾಟೀಲ್, ನಟಿ ಸ್ವರಾ ಭಾಸ್ಕರ್ ಅವರಿಗೆ ನೋಟಿಸ್ ನೀಡಲಾಗಿದೆ.
ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ಅನೂಪ್ ಕುಮಾರ್ ಮೆಂಡಿರಟ್ಟ ಅವರಿದ್ದ ಪೀಠ ಈ ಆದೇಶ ನೀಡಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.