ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಕ್ಷೇತ್ರಗಳ ಕ್ಷೇತ್ರ ಪುನರ್ ವಿಂಗಡಣೆಗಾಗಿ ಹೊರಡಿಸಲಾಗಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕ್ಷೇತ್ರ ಪುನರ್ವಿಂಗಡಣಾ ಆಯೋಗವನ್ನು ರಚಿಸಿ ಕಾನೂನು ಮತ್ತು ಸಂಸದೀಯ ಇಲಾಖೆಯು ಹೊರಡಿಸಿರುವ ಅಧಿಸೂಚನೆಗೆ ಅಧಿಕಾರ ವ್ಯಾಪ್ತಿ ಇಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು 107ರಿಂದ 114 ಕ್ಕೆ ಹೆಚ್ಚಿಸಿರುವುದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದ್ದು, ಸಂವಿಧಾನದ 170ನೇ ವಿಧಿಯ ಅನ್ವಯ ಕ್ಷೇತ್ರ ಪುನರ್ವಿಂಗಡಣೆಯನ್ನು2026ರ ನಂತರವಷ್ಟೇ ಮಾಡಬೇಕಿದೆ ಎನ್ನಲಾಗಿದೆ. ಶ್ರೀನಗರ ನಿವಾಸಿಗಳಾದ ಹಾಜಿ ಅಬ್ದುಲ್ ಗನಿ ಖಾನ್ ಮತ್ತು ಡಾ. ಮೊಹಮ್ಮದ್ ಅಯೂಬ್ ಮಟ್ಟು ಅರ್ಜಿ ಸಲ್ಲಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.